ರೇಷ್ಮೆ ಗೂಡು 785 ರೂಪಾಯಿ ಮುಟ್ಟಿರುವುದು ಸಂತಸ ತಂದಿದೆ: ಸಚಿವ ಡಾ. ನಾರಾಯಣಗೌಡ

ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಸಂತಸ ವ್ಯಕ್ತಪಡಿಸಿದ್ದಾರೆ. 
ಸಚಿವ ಕೆಸಿ ನಾರಾಯಣಗೌಡ
ಸಚಿವ ಕೆಸಿ ನಾರಾಯಣಗೌಡ

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಸಂತಸ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 'ಪ್ರತಿ ಕೆಜಿ ಗೂಡಿಗೆ 700 ರೂಪಾಯಿಗೂ ಮೆಲ್ಪಟ್ಟು ಸಿಗುತ್ತಿರುವುದು ರೇಷ್ಮೆ ಬೆಳೆಗಾರರಿಗೆ ಸಂತೋಷವನ್ನು ತಂದಿದೆ. ನಿನ್ನೆ ರಾಮನಗರ ಮಾರುಕಟ್ಟೆಯಲ್ಲಿ ಒಂದು ಕೆಜಿ ರೇಷ್ಮೆ ಗೂಡು 785 ರೂ.ಗೆ ಮಾರಾಟವಾಗಿದೆ. ಉತ್ತಮ ಗುಣಮಟ್ಟದ ರೇಷ್ಮೆ ಗೂಡು ಬೆಳೆಯಲು ಇದು ಸಹಕಾರಿಯಾಗಲಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ಇದು ಸಂತಸದ ವಿಚಾರ ಎಂದು ಹೇಳಿದರು.

ಅಂತೆಯೇ ರೇಷ್ಮೆ ಗೂಡಿನ ದರವೂ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರೇಷ್ಮೆ ಬೆಳೆಗಾರರ ಜೊತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆ ಗೂಡು ದರ 700 ರೂಪಾಯಿ ದಾಟಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com