ಕಮಿಷನ್ ದಂಧೆ: ಸ್ವತಂತ್ರ ತನಿಖೆಗೆ ಗುತ್ತಿಗೆದಾರರ ಸಂಘ ಆಗ್ರಹ

ಟೆಂಡರ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆವರು ಹೇಳಿದ್ದು, ಈ ನಡುವಲ್ಲೇ ಪ್ರಕರಣವನ್ನು ಸ್ವತಂತ್ರ ತನಿಖೆ ನಡೆಸುವಂತೆ ಗುತ್ತಿಗೆದಾರರ ಸಂಘ ಶುಕ್ರವಾರ ಆಗ್ರಹಿಸಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಟೆಂಡರ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆವರು ಹೇಳಿದ್ದು, ಈ ನಡುವಲ್ಲೇ ಪ್ರಕರಣವನ್ನು ಸ್ವತಂತ್ರ ತನಿಖೆ ನಡೆಸುವಂತೆ ಗುತ್ತಿಗೆದಾರರ ಸಂಘ ಶುಕ್ರವಾರ ಆಗ್ರಹಿಸಿದೆ.

ಈ ಕುರಿತು ಮಾತನಾಡಿರುವ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರು, ಕಾಲಮಿತಿಯಲ್ಲಿ ಸ್ವತಂತ್ರ ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ. ಈ ಕುರಿತು ನಾವೂ ಕೂಡ ಮಾಹಿತಿಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ಪ್ರಧಾನಿಗೆ ಬರೆದ ಪತ್ರದಲ್ಲಿ ಗುತ್ತಿಗೆ ನೀಡುವಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ನೆರೆ ರಾಜ್ಯದ ಗುತ್ತಿಗೆದಾರರನ್ನು ಪ್ರೋತ್ಸಾಹಿಸುತ್ತಿರುವ ಬಗ್ಗೆಯೂ ಸಂಘ ಕಳವಳ ವ್ಯಕ್ತಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಟೆಂಡರ್‌ಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅವ್ಯವಹಾರ ಕಂಡುಬಂದಲ್ಲಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಸರಕಾರ ಸೂಚಿಸಿದೆ.

ನಿವೃತ್ತ ನ್ಯಾಯಾಧೀಶರ ನೇತೃತ್ವದ ಎರಡು ಸಮಿತಿಗಳು ಟೆಂಡರ್ ಅಂದಾಜು ಮತ್ತು ಷರತ್ತುಗಳನ್ನು ಸಹ ಪರಿಶೀಲಿಸಲಿವೆ ಎಂದು ಬೊಮ್ಮಾಯಿ ಅವರು ಗುರುವಾರ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com