ಬೆಂಗಳೂರು: ನೌಕರಿ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ, ನಕಲಿ ಸರ್ಕಾರಿ ಅಧಿಕಾರಿ ಬಂಧನ

ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಶನಿವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಯು ಉಡುಪಿಯ ಕುಂದಾಪುರದ ಬಸರೂರು ಗ್ರಾಮದ ರಾಘವೇಂದ್ರ ಪೂಜಾರಿ ಎಂದು ಗುರುತಿಸಲಾಗಿದೆ. ರಾಘವೇಂದ್ರ ರಾಜ್ಯಾದ್ಯಂತ 18ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ 1 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

10ನೇ ತರಗತಿ ತೇರ್ಗಡೆಯಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ, ಸುಮಾರು 10 ವರ್ಷಗಳಿಂದ ಜೆಪಿ ನಗರದಲ್ಲಿ ನೆಲೆಸಿದ್ದ. ಆರೋಪಿ ಹಲವರಿಗೆ ವಂಚಿಸಿ ಕೋಟ್ಯಂತರ ಹಣ ಮಾಡಿದ್ದಾನೆ. ಸ್ವಂತ ಊರಿನಲ್ಲಿ ಒಂದು ಮನೆ, ತುಮಕೂರಿನಲ್ಲಿ ಹೋಟೆಲ್, ಕೆಂಗೇರಿಯಲ್ಲಿ ಫ್ಲ್ಯಾಟ್, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹೊಂದಿದ್ದಾನೆ. ಓಡಾಡುವುದಕ್ಕೆ 2 ಕಾರು ಕೂಡಾ ಖರೀದಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ ವಂಚನೆಗೊಳಗಾದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿಸಿಬಿಯು ಪ್ರಕರಣ ದಾಖಲಿಸಿಕೊಂಡು ಪೂಜಾರಿಯನ್ನು ಬಂಧಿಸಿದೆ ಎಂದು ಸಿಸಿಬಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ರಾಜ್ಯಾದ್ಯಂತ ಸಂಚರಿಸಿ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ನೌಕರಿ ಕೊಡಿಸುತ್ತೇನೆ ಎಂದು ವಂಚಿಸಿದ್ದಾರೆ. ತಾನು ಭೂಮಾಪನ ಇಲಾಖೆಯ ಡೆಪ್ಯುಟಿ ಕಮಿಷನರ್ ಎಂದು ನಕಲಿ ಗುರುತಿನ ಚೀಟಿ ತೋರಿಸಿ, ಅವರು ಕೇಳುವ ಕೆಲಸದ ಆಧಾರದ ಮೇಲೆ ಪ್ರತಿಯೊಬ್ಬರಿಂದ 4 ಲಕ್ಷದಿಂದ  12 ಲಕ್ಷ ರೂಪಾಯಿವರೆಗೆ ವಸೂಲಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com