ಕಮಿಷನ್ ದಂಧೆ ಬಗ್ಗೆ ಗುತ್ತಿಗೆದಾರರ ಸಂಘದ ದೂರಿನ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಬಿಡಿಎ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಸರ್ಕಾರ ಅಧಿಕಾರದಲ್ಲಿರಲು ಯೋಗ್ಯತೆಯಿಲ್ಲ, ಹೀಗಾಗಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಭಾರತ ಸಂವಿಧಾನದ 356ನೇ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರುವ ಎಲ್ಲಾ ಅವಕಾಶಗಳು ಇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾ
Published: 27th November 2021 01:17 PM | Last Updated: 27th November 2021 02:05 PM | A+A A-

ಸಿದ್ದರಾಮಯ್ಯ
ಮೈಸೂರು: ಬಿಡಿಎ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಸರ್ಕಾರ ಅಧಿಕಾರದಲ್ಲಿರಲು ಯೋಗ್ಯತೆಯಿಲ್ಲ, ಹೀಗಾಗಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಭಾರತ ಸಂವಿಧಾನದ 356ನೇ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರುವ ಎಲ್ಲಾ ಅವಕಾಶಗಳು ಇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿಂದು ಮಾತನಾಡಿದ ಅವರು, ಎಸಿಬಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಕೈಕೆಳಗೆ ಇದೆ. ಬಿಡಿಎಯಲ್ಲಿನ ಭ್ರಷ್ಟಾಚಾರ ಮತ್ತು ಇತ್ತೀಚೆಗೆ ಸರ್ಕಾರವೇ ಎಸಿಬಿಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿಸಿದೆ. ಪ್ರಧಾನಿ ಮೋದಿಗೆ ಗುತ್ತಿಗೆದಾರರ ಸಂಘದಿಂದ ದೂರು ಹಿನ್ನೆಲೆ, ಸುಪ್ರೀಂ ಕೋರ್ಟ್ ಜಡ್ಜ್ ಅವರಿಂದ ವಿಚಾರಣೆ ಆಗಲಿ, ಯಾರು ಲಂಚ ತೆಗೆದುಕೊಂಡಿದ್ದಾರೆ ಅವರಿಗೆ ತಕ್ಕ ಶಿಕ್ಷೆ ಆಗಲಿ ಎಂದು ಆಗ್ರಹಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ಆಗ್ರಹ
ನಾವು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಗುತ್ತಿಗೆ ಅಸೋಸಿಯೇಷನ್ ನವರು ಪತ್ರ ಬರೆದಿದ್ದರೇ. ನಿರ್ದಿಷ್ಟ ಘಟನೆಗಳು ಇಲ್ಲ ಅಂದ ಮೇಲೆ ಕಾರ್ಯದರ್ಶಿಗಳಿಗೆ ಏಕೆ ಸರ್ಕಾರ ಕೊಟ್ಟಿದೆ. ರಾಜ್ಯದ ಸಂಸದರು, ಸಚಿವರು, ಶಾಸಕರು ಶೇಕಡಾ 40ರಷ್ಟು ಕಮಿಷನ್ ನ್ನು ಗುತ್ತಿಗೆಯಲ್ಲಿ ಪಡೆಯುತ್ತಿದ್ದಾರೆ ಎಂದು ಗುತ್ತಿಗೆ ಅಸೋಸಿಯೇಷನ್ ನ ಅಧ್ಯಕ್ಷ ಕೆಂಪಣ್ಣನವರೇ ಪತ್ರ ಬರೆದು ಮಾಧ್ಯಮಗಳ ಮುಂದೆಯೇ ಹೇಳಿದ್ದು ವರದಿಯಾಗಿದೆ ಎಂದರು.
ಇದನ್ನೂ ಓದಿ: ಸರ್ಕಾರ ವಜಾ ಮಾಡುವಂತೆ ರಾಜ್ಯಪಾಲರಿಗೆ ವಿಪಕ್ಷಗಳ ದೂರು ಹಾಸ್ಯಾಸ್ಪದ: ಸಿಎಂ ಬೊಮ್ಮಾಯಿ
ರಾಜ್ಯ ಸರ್ಕಾರದ ಕಮಿಷನ್ ದಂಧೆ ಹಾಗೂ ಅಕ್ರಮ ಹಣದ ವರ್ಗಾವಣೆ ಬಗ್ಗೆ ಗುತ್ತಿದಾರರ ಸಂಘ ಪ್ರಧಾನಿಗಳಿಗೆ ಬರೆದ ಪತ್ರದ ಬಗ್ಗೆ ಪತ್ರಿಕೆಗಳು ವರದಿ ಮಾಡಿವೆ. ನಮ್ಮ ಸರ್ಕಾರವನ್ನು 10% ಸರ್ಕಾರ ಎಂದು ಕರೆದಿದ್ದ ಪ್ರಧಾನಿ @narendramodi ಅವರು ಇದಕ್ಕೇನು ಹೇಳ್ತಾರೆ? 3/4
— Siddaramaiah (@siddaramaiah) November 25, 2021
#40%BJP pic.twitter.com/ikycpWF76D