ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟ ಶುರು: ಮೈಸೂರಿನಲ್ಲಿ 50ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್!

ಧಾರವಾಡದ ವೈದ್ಯಕೀಯ ಕಾಲೇಜಿನ 180ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಇದೀಗ ಮೈಸೂರಿನಲ್ಲೂ ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಧಾರವಾಡದ ವೈದ್ಯಕೀಯ ಕಾಲೇಜಿನ 180ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಇದೀಗ ಮೈಸೂರಿನಲ್ಲೂ ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ.

ಮೈಸೂರಿನಲ್ಲಿ ಒಂದು ವಾರದ ಅವಧಿಯಲ್ಲಿ ಎರಡು ಖಾಸಗಿ ಕಾಲೇಜುಗಳ 50ಕ್ಕೂ ಹೆಚ್ಚು ನರ್ಸಿಂಗ್‌ ವಿದ್ಯಾರ್ಥಿಗಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಜಿಲ್ಲಾಡಳಿತದ ಅಧಿಕಾರಿಗಳು ನೀಡಿರುವ ಮಾಹಿತಿಗಳ ಪ್ರಕಾರ, ಎರಡು ಖಾಸಗಿ ನರ್ಸಿಂಗ್ ಕಾಲೇಜುಗಳ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಸಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಎಲ್ಲಾ ವಿದ್ಯಾರ್ಥಿಗಳೂ ಸಂಪೂರ್ಣವಾಗಿ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದ್ದಾರೆ.

ಡೆಪ್ಯುಟಿ ಕಮಿಷನರ್ ಡಾ ಬಗಾದಿ ಗೌತಮ್ ಈ ಕುರಿತು ಖಚಿತ ಮಾಹಿತಿ ನೀಡಿದ್ದು, ಒಂದು ವಾರದ ಅವಧಿಯಲ್ಲಿ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. "ಇದು ಕ್ಲಸ್ಟರ್ ಪ್ರಕರಣವಾದ್ದರಿಂದ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದೀಗ ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಸಂಪೂರ್ಣ ಲಸಿಕೆ ಹಾಕಿಸಿಕೊಂಡಿದ್ದು, ಹೆಚ್ಚಿನವರು ಲಕ್ಷಣರಹಿತರಾಗಿದ್ದಾರೆ ಎಂದು ವಿದ್ಯಾರ್ಥಿಗಳು ದಾಖಲಾಗಿರುವ ಜಿಲ್ಲಾ ಆಸ್ಪತ್ರೆಯ ಮೂಲಗಳು ಮಾಹಿತಿ ತಿಳಿಸಿವೆ.
 
"ಶುಕ್ರವಾರ 25 ಹೊಸ ಪ್ರಕರಣಗಳು ಕಂಡು ಬಂದಿದೆ. ಆದರೆ ಅವುಗಳಲ್ಲಿ ಹೆಚ್ಚಿನ ಪ್ರಕರಣ ಲಕ್ಷಣರಹಿತವಾಗಿವೆ ಎಂದು ಹೇಳಿದೆ.

ಕೊರೋನಾ ಎರಡನೇ ಅಲೆಯಲ್ಲಿ ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದ ಮೈಸೂರಿನಲ್ಲಿ ಈ ಘಟನೆ ಇದೀಗ ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಜಿಲ್ಲೆಯಲ್ಲಿ ಈ ವಾರ 110 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳು ವರದಿಯಾಗಿವೆ, ಶುಕ್ರವಾರದ ಹೊತ್ತಿಗೆ, ಜಿಲ್ಲೆಯಲ್ಲಿ 1,79,675 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 1,77,016 ಮಂದಿ ಚೇತರಿಸಿಕೊಂಡಿದ್ದಾರೆ ಮತ್ತು 2,429 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ 230 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com