ಪೊಲೀಸರ ಹಿಂಬಾಲಿಸುತ್ತಿರುವ ಗೂಳಿ
ಪೊಲೀಸರ ಹಿಂಬಾಲಿಸುತ್ತಿರುವ ಗೂಳಿ

ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಹೆದ್ದಾರಿ ಬಂದ್, ಸಂಚಾರ ಅಸ್ತವ್ಯಸ್ತ

ದೆಹಲಿ ರೈತ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಕರೆಯಂತೆ ಬೆಂಗಳೂರು-ಮೈಸೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275 , ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿ ಸಂದಿಸುವ ಶ್ರೀರಂಗಪಟ್ಟಣ ಬಳಿಯ ಕಿರಂಗೂರು ಸರ್ಕಲ್ ನಲ್ಲಿ ಸಹಸ್ರಾರು ರೈತರು ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.

ಮೈಸೂರು: ದೆಹಲಿ ರೈತ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಕರೆಯಂತೆ ಬೆಂಗಳೂರು-ಮೈಸೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275 , ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿ ಸಂದಿಸುವ ಶ್ರೀರಂಗಪಟ್ಟಣ ಬಳಿಯ ಕಿರಂಗೂರು ಸರ್ಕಲ್ ನಲ್ಲಿ ಸಹಸ್ರಾರು ರೈತರು ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.

ರಾಜ್ಯ ಕಬ್ಬು ಬೆಳೆಗಾರರ ​​ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್, ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬಂಡಿಪಾಳ್ಯ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ದೆಹಲಿ ಗಡಿಯಲ್ಲಿ ಮೃತಪಟ್ಟ 700ಕ್ಕೂ ಹೆಚ್ಚು ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ಸಂತೇಮರಹಳ್ಳಿ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ನಂಜನಗೂಡು ರಸ್ತೆಯಲ್ಲಿರುವ ಎಪಿಎಂಸಿ ವೃತ್ತದ ಹೊರ ವರ್ತುಲ ರಸ್ತೆಬಳಿ ನೆರೆದಿದ್ದ ನೂರಾರು ರೈತರು ರಸ್ತೆತಡೆದು ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 11ರಿಂದ ಮಧಅಯಾಹ್ನ 2 ಗಂಟೆಯವರೆಗೂ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದವು.  ಹೀಗಾಗಿ ಸಂಚಾರ ಪೊಲೀಸರು ಬದಲಿ ಮಾರ್ಗದ ವ್ಯವಸ್ಥೆ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬೆಂಗಳೂರು ಕಡೆಗೆ ಹೋಗುವ ವಾಹನಗಳನ್ನು ಕೆಆರ್‌ಎಸ್ ಮತ್ತು ಬನ್ನೂರು-ಮಳವಳ್ಳಿ ಮೂಲಕ ಹೋಗಲು ಅನುವು ಮಾಡಿಕೊಡಲಾಯಿತು..

ಮೈಸೂರು, ಬೆಂಗಳೂರು, ಗುಂಡ್ಲುಪೇಟೆ ಕಡೆಗೆ ತೆರಳಲು ಪರ್ಯಾಯ ರಸ್ತೆಯಲ್ಲಿ ಸಂಚರಿಸಬೇಕಾದ ವಾಹನ ಸವಾರರು ಪರದಾಡಿದರು.

ಸಂಯುಕ್ತ ಕಿಸಾನ್ ಮೋರ್ಚಾದ ಬಂದ್'ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎತ್ತಿನ ಬಂಡಿ, ಜಾನುವಾರು, ಟ್ರ್ಯಾಕ್ಟರ್'ಗಳೊಂದಿಗೆ ರಸ್ತೆ ತಡೆ ನಡೆಸಿದರು. ಈ ವೇಳೆ ಆಂಬ್ಯುಲೆನ್ಸ್‌ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದು ಮಾಡಿದೆ. ಆದರೆ, ಬೆಳೆಗಳಿಗೆ ಶಾಸನ ಬದ್ಧ ಕನಿಷ್ಠ ಬೆಂಬಲ ಬೆಲೆ ನೀಡಲು ಕಾನೂನು ಜಾರಿಗೊಳಿಸಿಲ್ಲ. ಈ ಸಂಬಂಧ ಕಾನೂನು ಜಾರಿಗೊಳಿಸಬೇಕು. ಕರ್ನಾಟಕದಲ್ಲಿ ಅತಿವೃಷ್ಟಿ, ಅಕಾಲಿಕ ಮಳೆಯಿಂದ 7 ಲಕ್ಷ ಹೆಕ್ಟೇರ್ ಬೆಳೆ ನಾಷವಾಗಿದೆ. ಎನ್'ಡಿಆರ್ ಪರಿಹಾರ ಅವೈಜ್ಞಾನಿಕವಾಗಿದ್ದು, ವೈಜ್ಞಾನಿಕ ಬೆಲೆ ನೀಡಬೇಕು. ಸರ್ಕಾರ ಜನಪರ, ರೈತಪರ ತೀರ್ಮಾನ ಕೈಗೊಂಡು ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.

ಮಡಿಕೇರಿಯಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ
ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಕೊಡಗಿನ ರೈತರು ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.

"ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರ ಜೊತೆಗೆ, ಸರ್ಕಾರವು ಬೆಂಬಲ ಬೆಲೆಗಳನ್ನು ಘೋಷಿಸಬೇಕು. ವಿದ್ಯುತ್ ಖಾಸಗೀಕರಣ ಮತ್ತು ಇಂಧನ ಬೆಲೆ ಏರಿಕೆಯನ್ನು ನಿಲ್ಲಿಸಬೇಕು. ದೆಹಲಿಯ ಗಡಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದರು

Related Stories

No stories found.

Advertisement

X
Kannada Prabha
www.kannadaprabha.com