ಓಮಿಕ್ರಾನ್ ಆತಂಕ: ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ವಿಶ್ವದಾದ್ಯಂತ ಆತಂಕ ಸೃಷ್ಟಿಸುವ ಓಮಿಕ್ರಾನ್ ತಳಿಯ ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಶನಿವಾರ ಮಹತ್ವದ ಸಭೆ ನಡೆಸಲಾಗಿದ್ದು, ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಶ್ವದಾದ್ಯಂತ ಆತಂಕ ಸೃಷ್ಟಿಸುವ ಓಮಿಕ್ರಾನ್ ತಳಿಯ ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಶನಿವಾರ ಮಹತ್ವದ ಸಭೆ ನಡೆಸಲಾಗಿದ್ದು, ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಧಾರವಾಡ, ಬೆಂಗಳೂರು ಮತ್ತು ಮೈಸೂರಿನಲ್ಲಿ ನಾಲ್ಕು ವೈರಸ್ ಕ್ಲಸ್ಟರ್‌ಗಳು ವರದಿಯಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಅಧಿಕಾರಿಗಳು, ಸಚಿವರು, ಕೋವಿಡ್ ಸಲಹೆಗಾರರು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಶನಿವಾರ ತುರ್ತು ಸಭೆ ನಡೆಸಿದರು.

ಬೊಮ್ಮಾಯಿ ಅವರು ಇತರ ರಾಜ್ಯಗಳೊಂದಿಗೆ ವಿಶೇಷವಾಗಿ ಕೇರಳದೊಂದಿಗೆ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಈ ವೇಳೆ ಹಾಲಿ ವೈರಸ್'ಗಿಂತ ಹೊಸ ತಳಿಯ ವೈರಸ್ ಐದು ಪಟ್ಟು ವೇಗವಾಗಿ ಹರಡುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸೋಂಕು ಹರಡದಂತೆ ಎಚ್ಚರ ವಹಿಸಬೇಕೆಂದು ಸಭೆಯಲ್ಲಿ ತಜ್ಞರು ಸಲಹೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದ್ದು, ಎರಡೂ ಡೋಸ್ ಲಸಿಕೆ ಪಡೆಯದ ಉದ್ಯೋಗಿಗಳು ಎರಡು ಡೋಸ್ ಲಸಿಕೆ ಪಡೆದ ಬಳಿಕವೇ ಕಚೇರಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸುವಂತೆ ಸರ್ಕಾರ ತಿಳಿಸಿದೆ.

ಈ ನಡುವೆ ವಿಮಾನ ನಿಲ್ದಾಣಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖವಾಗಿ ಕೇರಳ ಮತ್ತು ಮಹಾರಾಷ್ಟ್ರದ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಿಂದ ಮತ್ತು ವಿದೇಶದಿಂದ ಆಗಮಿಸುವವರ ಮೇಲಿನ ಕಣ್ಗಾವಲನ್ನು ಹೆಚ್ಚಿಸಲಾಗಿದೆ.

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹೀಗಾಗಿ ಈ ಎರಡೂ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಆರ್'ಟಿ-ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯ ಮಾಡಲಾಗಿದೆ.

ಕರ್ನಾಟಕಕ್ಕೆ ಪ್ರವೇಶಿಸುವವರನ್ನು ಪರೀಕ್ಷಿಸಲು ಗಡಿ ಪ್ರದೇಶಗಳಲ್ಲಿ 24x7 ಕೆಲಸ ಮಾಡಲು ಆರೋಗ್ಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಪೊಲೀಸ್, ಕಂದಾಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮೂರು ಪಾಳಿಯಲ್ಲಿ ಕೆಲಸ ಮಾಡಬೇಕು ಮತ್ತು ಹಿರಿಯ ಅಧಿಕಾರಿಗಳು ರಾತ್ರಿ ವೇಳೆಯೂ ತಪಾಸಣೆ ನಡೆಸಬೇಕು ಎಂದು ಸರ್ಕಾರ ಹೇಳಿದೆ.

ಕಳೆದ 16 ದಿನಗಳ ಹಿಂದೆ ರಾಜ್ಯಕ್ಕೆ ಮರಳಿರುವ ಕೇರಳದ ವಿದ್ಯಾರ್ಥಿಗಳು, ಹಿಂದೆ ನೆಗೆಟಿವ್ ವರದಿಯೊಂದಿಗೆ ಆಗಮಿಸಿದ್ದರೂ ಕೂಡ ಅವರನ್ನು ಮತ್ತೆ ಆರ್'ಟಿ-ಪಿಸಿಆರ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

ದಕ್ಷಿಣ ಆಫ್ರಿಕಾದ ಪ್ರಯಾಣಿಕರಿಬ್ಬರೂ ಕ್ವಾರಂಟೈನ್‌ನಲ್ಲಿದ್ದಾರೆ
ಈ ಬಗ್ಗೆ ನನಗೆ ಇನ್ನೂ ಯಾವುದೇ ಮಾಹಿತಿ ಇಲ್ಲ. ಇಬ್ಬರ ಮಾದರಿಗಳನ್ನು ಇದೀಗ ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟಿಂಗ್'ಗೆ ಕಳುಹಿಸಲಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಡಿಸಿ ಕೆ ಶ್ರೀನಿವಾಸ್ ಅವರು ಮಾತನಾಡಿ, ಪ್ರಸ್ತುತ ಸೋಂಕು ತಗುಲಿರುವ ಇಬ್ಬರೂ ಭಾರತೀಯರೇ ಆಗಿದ್ದು, ದಕ್ಷಿಣ ಆಫ್ರಿಕಾಗೆ ಭೇಟಿ ನೀಡಿ ಭಾರತಕ್ಕೆ ವಾಪಸ್ಸಾಗಿದ್ದರು. ಒಬ್ಬರು ನವೆಂಬರ್ 11 ರಂದು ಮತ್ತು ಇನ್ನೊಬ್ಬರು ನವೆಂಬರ್ 20 ರಂದು ಭಾರತಕ್ಕೆ ವಾಪಸ್ಸಾಗಿದ್ದರು. ಭಾರತಕ್ಕೆ ವಾಪಸ್ಸಾದ ಬಳಿಕ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿದೆ. ಇದೀಗ ಇಬ್ಬರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟಿಂಗ್'ಗೆ ಕಳುಹಿಸಲಾಗಿದೆ. ಇಬ್ಬರಲ್ಲೂ ರೂಪಾಂತರಿ ವೈರಸ್ ಸೋಂಕು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಇದೀಗ ಆರೋಗ್ಯ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ಗಂಟೆಗಳ ಕಾಲ ಕಟ್ಟೆಚ್ಚರ ವಹಿಸಿದ್ದು, ವಿದೇಶದಿಂದ, ವಿಶೇಷವಾಗಿ ದಕ್ಷಿಣ ಆಫ್ರಿಕಾ ಮತ್ತು ಅಂತಹ 10 ಅಪಾಯಕಾರಿ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ಪರೀಕ್ಷೆಗೊಳಪಡಿಸುತ್ತಿದ್ದಾರೆ.

ಈ ನಡುವೆ ಪ್ರಯಾಣಿಕರೊಬ್ಬರನ್ನು ವಸಂತನಗರದ ಸ್ಟಾರ್ ಹೋಟೆಲ್‌ನಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ, ಇನ್ನೊಬ್ಬರನ್ನು ಬೊಮ್ಮನಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.

ನವೆಂಬರ್ 1 ಮತ್ತು 26 ರಂದು 10 ಅಪಾಯಕಾರಿ ದೇಶಗಳಿಂದ 584 ಜನರು ಬೆಂಗಳೂರಿಗೆ ಆಗಮಿಸಿದ್ದಾರೆ ಮತ್ತು 94 ಪ್ರಯಾಣಿಕರು ದಕ್ಷಿಣ ಆಫ್ರಿಕಾದಿಂದ ಬಂದಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿನೋಮ್ ಸೀಕ್ವೆನ್ಸಿಂಗ್ ಸಮಿತಿಯ ಸದಸ್ಯ ಡಾ.ವಿಶಾಲ್ ರಾವ್ ಅವರು ಮಾತನಾಡಿ, "ಓಮಿಕ್ರಾನ್ ವಿರುದ್ಧ ಜಾಗರೂಕರಾಗಿರುವುದು ಅತ್ಯಂತ ಮುಖ್ಯವಾಗಿದೆ, ಇದು ಇತ್ತೀಚಿನ ರೂಪಾಂತರಿ ವೈರಸ್ ಆಗಿದೆ. ದಕ್ಷಿಣ ಆಫ್ರಿಕಾ, ಬ್ರಿಟನ್ ನಂತಹ ದೇಶಗಳಲ್ಲಿ ಡೆಲ್ಟಾ ರೂಪಾಂತರು ವೈರಸ್'ನ್ನೂ ಈ ವೈರಸ್ ಹಿಂದಿಕ್ಕಿದೆ, ಈ ವೈರಸ್ ನಮ್ಮ ರಾಜ್ಯದಲ್ಲೂ ಪತ್ತೆಯಾದರೆ ಸೋಂಕು ವೇಗವಾಗಿ ಹರಡುವುದರಲ್ಲಿ ಅನುಮಾನವಿಲ್ಲ. ಈ ಬಗ್ಗೆ ಯಾರೂ ನಿರ್ಲಕ್ಷ್ಯ ತೋರಬಾರದು ಎಂದು ತಿಳಿಸಿದ್ದಾರೆ.

ಕೂಡಲೇ ಎಲ್ಲಾ ಸಭೆಗಳು, ಸಮಾರಂಭಗಳು ನಿಲ್ಲಿಸಬೇಕು. ರೂಪಾಂತರವನ್ನು ವೇಗವಾಗಿ ಪತ್ತೆಹಚ್ಚಲು ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟಿಂಗ್'ನ್ನು ಹೆಚ್ಚಿಸುವುದು ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಫಿಲಡೆಲ್ಫಿಯಾ ಮೂಲದ ಗಣಿತಶಾಸ್ತ್ರಜ್ಞ ಅತಿಶ್ ಬಾಗ್ಚಿ ಅವರು ಮಾತನಾಡಿ, ವೈರಸ್ ಸಾಕಷ್ಟು ರೂಪಾಂತರಗಳನ್ನು ಹೊಂದುತ್ತಿದೆ. ರೂಪಾಂತರಿ ವೈರಸ್ ಜೀವಂತವಾಗಿರಲು ಹೀಗೆಯೇ ಬಿಟ್ಟರೆ, ಅದು ಅಪಾಯವನ್ನು ತಂದೊಡ್ಡಲಿದೆ. ಈ ವೈರಸ್ ಗಳು ಜೀವಕೋಶಗಳಿಗೆ ಸೋಂಕು ತಗುಲಿಸುವ ಸುಧಾರಿತ ಸಾಮರ್ಥ್ಯವನ್ನು ಪಡೆದುಕೊಂಡರೆ ಮತ್ತು ಆತಿಥೇಯರ ಪ್ರತಿರಕ್ಷಣಾ ವ್ಯವಸ್ಥೆಯಿಂದ (ಲಸಿಕೆಯಿಂದ ಸಹಾಯ ಮಾಡಲ್ಪಟ್ಟಿರಲಿ ಅಥವಾ ಇಲ್ಲದಿರಲಿ) ಪತ್ತೆ ಮಾಡುವುದನ್ನು ತಪ್ಪಿಸಿದರೆ, ನಂತರ ವೈರಸ್ ವಿಕಸನೀಯ ಪ್ರಯೋಜನವನ್ನು ಪಡೆಯುತ್ತದೆ ಮತ್ತು ಪ್ರಸರಣವನ್ನು ಮುಂದುವರೆಸುತ್ತದೆ. ಆದ್ದರಿಂದ, ಜನರು ತಮಗೆ ತಾವೇ ಜಾಗರೂಕವಾಗಿರಬೇಕಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com