ಬೆಂಗಳೂರು: 'ರೈಡ್ ಫಾರ್ ಅಪ್ಪು' ಬೈಕ್ ಮೆರವಣಿಗೆಗೆ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ
ಪುನೀತ್ ರಾಜ್ ಕುಮಾರ್ ಅಭಿನಯದ ಜೊತೆಗೆ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆಯಲ್ಲಿ ತೊಡಗಲು ಸದಾ ಪ್ರೇರಕ ಶಕ್ತಿಯಾಗಿ ಚಿರಾಯುವಾಗಿರುತ್ತಾರೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
Published: 28th November 2021 02:44 PM | Last Updated: 28th November 2021 02:44 PM | A+A A-

ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಂದ ಬೈಕ್ ಮೆರಣಿಗೆಗೆ ಚಾಲನೆ
ಬೆಂಗಳೂರು: ಟೀಮ್ ದ್ವಿಚಕ್ರ ಮತ್ತು ಇಂಚರ ಸ್ಟುಡಿಯೊ ವತಿಯಿಂದ ಅಪ್ಪು ಅಗಲಿದ ಒಂದು ತಿಂಗಳ ನೆನಪಿಗಾಗಿ ಭಾನುವಾರ ಏರ್ಪಡಿಸಿದ್ದ ರೈಡ್ ಫಾರ್ ಅಪ್ಪು ಬೈಕ್ ಮೆರವಣಿಗೆಗೆ ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ ನೀಡಿದರು.
ಸ್ವಾತಂತ್ರ್ಯ ಉದ್ಯಾನದಿಂದ ಅಪ್ಪು ಸಮಾಧಿಯವರೆಗೆ ನಡೆದ ಮೆರವಣಿಗೆಯಲ್ಲಿ ಸುಮಾರು 200 ಬೈಕ್ ಸವಾರರು ಪಾಲ್ಗೊಂಡಿದ್ದರು. ಪುನೀತ್ ಅವರು ಹೆಲ್ಮೆಟ್ ಧರಿಸುವುದರ ಮಹತ್ವ ತಿಳಿಸಿಕೊಡುವ ವ ಜಾಹೀರಾತಿನ ಮೂಲಕ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದ್ದನ್ನು ನೆನೆದು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸಿದ್ದರು. ಸಚಿವ ಅಶ್ವತ್ಥ ನಾರಾಯಣ ಕೂಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಮ್ಮೆಲ್ಲರ ನೆಚ್ಚಿನ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಲು ಹಮ್ಮಿಕೊಳ್ಳಲಾದ 'ರೈಡ್ ಫಾರ್ ಅಪ್ಪು' ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
— Dr. Ashwathnarayan C. N. (@drashwathcn) November 28, 2021
"ಜತೆಗಿರದ ಜೀವ ಎಂದೆಂದಿಗೂ ಜೀವಂತ" ಎಂಬಂತೆ ಅಪ್ಪು ಅವರ ಸಾಧನೆಗಳನ್ನು ನಾಡಿನ ಮನೆ-ಮನಗಳಿಗೆ ತಲುಪಿಸಿ ಅವರನ್ನು ಚಿರಾಯುವಾಗಿಸುತ್ತಿರುವ ಅಭಿಮಾನಿಗಳು, ಹಿತೈಷಿಗಳಿಗೆ ಒಳ್ಳೆಯದಾಗಲಿ. pic.twitter.com/fcI3iD1PCj
ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ, ಪುನೀತ್ ರಾಜ್ ಕುಮಾರ್ ಅಭಿನಯದ ಜೊತೆಗೆ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆಯಲ್ಲಿ ತೊಡಗಲು ಸದಾ ಪ್ರೇರಕ ಶಕ್ತಿಯಾಗಿ ಚಿರಾಯುವಾಗಿರುತ್ತಾರೆ ಎಂದು ಹೇಳಿದರು.
ಪುನೀತ್ ಅವರ ಸಾಧನೆಯು ದಿನ ಕಳೆದಂತೆ ಹೆಚ್ಚೆಚ್ಚು ಜನರನ್ನು ತಲುಪುತ್ತಿದೆ. ಇದು ನಮ್ಮ ವಿದ್ಯಾರ್ಥಿ ಸಮೂಹ ಸೇರಿದಂತೆ ಎಲ್ಲರಿಗೂ ಸ್ಫೂರ್ತಿಯಾಗಬೇಕು. ಪ್ರತಿಯೊಬ್ಬರೂ ತಂತಮ್ಮ ಕ್ಷೇತ್ರದಲ್ಲಿ ಸ್ವಂತಿಕೆ ಹಾಗೂ ಸಮಾಜಪರ ಮನೋಭಾವದೊಂದಿಗೆ ಕೆಲಸ ಮಾಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.