ವಿಜಯಪುರ: ಕೆಎಸ್ಆರ್ಟಿಸಿ ಬಸ್- ಫಾರ್ಚೂನರ್ ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು
ವಿಜಯಪುರ ಸಮೀಪದ ಜುಮನಾಳ ಕ್ರಾಸ್ ಬಳಿ ಭಾನುವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಫಾರ್ಚೂನರ್ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Published: 28th November 2021 11:58 PM | Last Updated: 28th November 2021 11:58 PM | A+A A-

ಸಾಂದರ್ಭಿಕ ಚಿತ್ರ
ವಿಜಯಪುರ: ವಿಜಯಪುರ ಸಮೀಪದ ಜುಮನಾಳ ಕ್ರಾಸ್ ಬಳಿ ಭಾನುವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಫಾರ್ಚೂನರ್ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಪೈಕಿ ಒಬ್ಬರು ಚಿದಾನಂದ ಸೂರ್ಯವಂಶಿ(40) ಎಂದು ಗುರುತಿಸಲಾಗಿದ್ದು, ಉಳಿದ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ.
ಇದನ್ನು ಓದಿ: ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸಾವು
ಇಂದು ಸಂಜೆ ವಿಜಯಪುರಕ್ಕೆ ಬರುತ್ತಿದ್ದ ಫಾರ್ಚೂನರ್ ಕಾರಿಗೆ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದವರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ನರಗುಂದದಿಂದ ವಿಜಯಪುರಕ್ಕೆ ಆಗಮಿಸಿದ್ದರು. ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದಾರೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.