ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ (ಸಂಗ್ರಹ ಚಿತ್ರ)
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ (ಸಂಗ್ರಹ ಚಿತ್ರ)

ಬೆಂಗಳೂರು: ಸ್ಫೂರ್ತಿ ಕಾಲೇಜಿನ ಇನ್ನೂ ಐದು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಮರಸೂರಿನ ಸ್ಪೂರ್ತಿ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಭಾನುವಾರ ಮತ್ತೆ ಐದು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ನರ್ಸಿಂಗ್ ಕಾಲೇಜ್ ನ ಸೋಂಕಿತರ...

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಮರಸೂರಿನ ಸ್ಪೂರ್ತಿ ಕಾಲೇಜ್ ಆಫ್ ನರ್ಸಿಂಗ್‌ ನಲ್ಲಿ ಭಾನುವಾರ ಮತ್ತೆ ಐದು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ನರ್ಸಿಂಗ್ ಕಾಲೇಜ್ ನ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಈ ಮುನ್ನ 12 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇಂದು ಮತ್ತೆ ಐವರು ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಎಲ್ಲರೂ ಲಕ್ಷಣರಹಿತರಾಗಿದ್ದಾರೆ ಮತ್ತು ಅವರನ್ನು ಜಿಗಣಿಯಲ್ಲಿರುವ ಅದೇ COVID-19 ಕೇರ್ ಸೆಂಟರ್‌ನಲ್ಲಿ ಪ್ರತ್ಯೇಕಿಸಲಾಗಿದೆ.

ಈ ಮಧ್ಯೆ, ರಾಜ್ಯದಲ್ಲಿ ಇಂದು 315 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯನ್ನು 2995600ಕ್ಕೆ ಏರಿಕೆಯಾಗಿದೆ. 

236 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,831 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Related Stories

No stories found.

Advertisement

X
Kannada Prabha
www.kannadaprabha.com