ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರಿಂದ 1,499 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು 1,499 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
Published: 29th November 2021 10:27 AM | Last Updated: 29th November 2021 02:03 PM | A+A A-

ಸಂಗ್ರಹ ಚಿತ್ರ
ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು 1,499 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಎರಡೂ ಅಪರಾಧಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ನಂತರ ಎರಡೂ ಪ್ರಕರಣಗಳಲ್ಲಿ ಶೀಘ್ರ ದೋಷಾರೋಪ ಪಟ್ಟಿ ಸಲ್ಲಿಸುವುದಾಗಿ ಡಿಜಿಪಿ ಪ್ರವೀಣ್ ಸೂದ್ ಮತ್ತು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಭರವಸೆ ನೀಡಿದ್ದರು.
ಪೊಲೀಸರು ಇದೀಗ ಮೂರನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 1,499 ಪುಟಗಳ ಚಾರ್ಜ್‌ಶೀಟ್ ಮತ್ತು ದರೋಡೆ ಪ್ರಕರಣ ಸಂಬಂಧ 1,410 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಇದೇ ವರ್ಷ ಆಗಸ್ಟ್ 23 ರಂದು ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಶೂಟೌಟ್ ಮತ್ತು ದರೋಡೆ ನಡೆದಿತ್ತು. ಈ ವೇಳೆ ದಡದಹಳ್ಳಿ ಚಂದ್ರು ಮೃತಪಟ್ಟಿದ್ದರು. ಶೂಟೌಟ್ ಮತ್ತು ದರೋಡೆ ಪ್ರಕರಣ ಸಂಬಂಧ 7 ಜನರನ್ನು ಬಂಧಿಸಲಾಗಿದೆ, ಒಬ್ಬ ತಲೆ ಮರೆಸಿಕೊಂಡಿದ್ದಾನೆ. 6 ಮಂದಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 397, 376 ಬಿ, 109, 120 ಬಿ, 334, 325, 326 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇನ್ನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 397, 376 ಬಿ, 109, 120 ಬಿ, 334, 325, 326 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.