ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟ: ಹಾಸನದ ಚನ್ನರಾಯಪಟ್ಟಣದ ವಸತಿ ಶಾಲೆಯ 13 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್

ಧಾರವಾಡ ನಗರದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡು ಕ್ಲಸ್ಟರ್ ಆದ ಬಳಿಕ ಇದೀಗ ಹಾಸನ ಜಿಲ್ಲೆ ಸರದಿ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಧಾರವಾಡ ನಗರದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡು ಕ್ಲಸ್ಟರ್ ಆದ ಬಳಿಕ ಇದೀಗ ಹಾಸನ ಜಿಲ್ಲೆ ಸರದಿ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯ 13 ಮಂದಿ ಹೈಸ್ಕೂಲ್ ವಿದ್ಯಾರ್ಥಿಗಳಲ್ಲಿ ಇಂದು ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಶಾಲೆಯ ಇತರ ಮಕ್ಕಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ.

ಈ ಮೂಲಕ ಕೋವಿಡ್-19 ಅಲೆಯ ಮೂರನೇ ಹಂತದಲ್ಲಿ ಹೆಚ್ಚು ಹೆಚ್ಚಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬರುತ್ತಿರುವುದು ಮತ್ತೆ ಸಾಬೀತಾಗಿದೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಲು ಶಾಲೆಗೆ ಸೂಚನೆ ನೀಡಲಾಗಿದೆ.

ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ಶಾಲೆಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ಕ್ರಮ ಕುರಿತು ಚರ್ಚಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com