ಕೋವಿಡ್ ಎಫೆಕ್ಟ್: ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚನೆ
ಮುಂದಿನ ಎರಡು ತಿಂಗಳ ಕಾಲ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
Published: 29th November 2021 10:14 AM | Last Updated: 29th November 2021 10:14 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಮುಂದಿನ ಎರಡು ತಿಂಗಳ ಕಾಲ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಸೆಮಿನಾರ್, ಕಾನ್ಫರೆನ್ಸ್, ಶೈಕ್ಷಮಿಕ ಚಟುವಟಿಕೆಯನ್ನು ಮುಂದೂಡಿ ಇಲ್ಲವೇ ಕಡಿಮೆ ಜನರ ಭೌತಿಕ ಹಾಜರಿಯಲ್ಲಿ ಹೈಬ್ರಿಡ್ ಮಾದರಿಯಲ್ಲಿ ಕಾರ್ಯಕ್ರಮ ಆಯೋಜಿಸಿ, ಕಾಲೇಜು ಆವರಣದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ಆಗುವಂತೆ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರು ನಿಗಾ ಇಡಬೇಕೆಂದು ಸರ್ಕಾರ ಹೇಳಿದೆ.
ಮೆಡಿಕರ್, ಪ್ಯಾರಾಮೆಡಿಕಲ್ ಸೇರಿದಂತೆ ಇಂತಹ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಪ್ರತಿದಿನ ಕೋವಿಡ್-19ರ ರೋಗಲಕ್ಷಣಗಳಿವೆಯೇ ಎಂದು ಪರಿಶೀಲಿಸಬೇಕು. ಸೋಂಕು ಲಕ್ಷಣಗಳಿದ್ದರೆ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಸೋಂಕು ದೃಢಪಟ್ಟರೆ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದೆ.
18 ವರ್ಷದ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿರುವುದನ್ನು ಶೈಕ್ಷಣಿಕ ಸಂಸ್ಥೆಯ ಖಾತರಿಪಡಿಸಬೇಕು. ಆರೋಗ್ಯ ಕ್ಷೇತ್ರದ ವೃತ್ತಿಪರರು ಸಮ್ಮೇಳನ, ವಿಚಾರಗೋಷ್ಠಿಗಳನ್ನು ಮುಂದಿನ ಕೆಲವು ತಿಂಗಳ ಕಾಲ ವರ್ಚುವಲ್ ರೂಪದಲ್ಲಿ ಮಾಡಬೇಕು ಎಂದು ತಿಳಿಸಿದೆ.