ಕೋವಿಡ್: ಸೋಂಕು ಪೀಡಿತ ದಕ್ಷಿಣ ಆಫ್ರಿಕಾದ ಪ್ರಯಾಣಿಕರ ವರದಿ ಮರುಪರಿಶೀಲಿಸಲು ಅಧಿಕಾರಿಗಳು ಮುಂದು!

ಬೆಂಗಳೂರಿಗೆ ಬಂದಿಳಿದ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರಲ್ಲೂ ಪತ್ತೆಯಾಗಿರುವುದು ಡೆಲ್ಟಾ ಮಾದರಿ ಸೋಂಕು ಪತ್ತೆಯಾಗಿದೆ ಹೊರತು ಓಮಿಕ್ರಾನ್ ಅಲ್ಲ ಎಂದು ದೃಢಪಟ್ಟಿದ್ದರೂ ವರದಿಯನ್ನು ಮರುಪರಿಶೀಲನೆ ನಡೆಸಲು ಜೀನೋಮ್ ಸಮಿತಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿಗೆ ಬಂದಿಳಿದ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರಲ್ಲೂ ಪತ್ತೆಯಾಗಿರುವುದು ಡೆಲ್ಟಾ ಮಾದರಿ ಸೋಂಕು ಪತ್ತೆಯಾಗಿದೆ ಹೊರತು ಓಮಿಕ್ರಾನ್ ಅಲ್ಲ ಎಂದು ದೃಢಪಟ್ಟಿದ್ದರೂ ವರದಿಯನ್ನು ಮರುಪರಿಶೀಲನೆ ನಡೆಸಲು ಜೀನೋಮ್ ಸಮಿತಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇಬ್ಬರಲ್ಲೂ ಓಮಿಕ್ರಾನ್ ರೂಪಾಂತರಿ ವೈರಸ್ ಕಂಡು ಬರದೇ ಇದ್ದರು, ಮತ್ತೊಮ್ಮೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತ ವರದಿ ಸೋಮವಾರ ಸಂಜೆ ಅಥವಾ ಮಂಗಳವಾರದಂದು ಬರುವ ನಿರೀಕ್ಷೆಯಿದೆ ಎಂದು ರಾಜ್ಯ ಸರ್ಕಾರ ರಚಿಸಿರುವ ಸಮಿತಿಯ ಭಾಗವಾಗಿರುವ ತಜ್ಞರು ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ ತಪಾಸಣೆ ಮತ್ತು ಕಣ್ಗಾವಲು ಹೆಚ್ಚಿಸುವಂತೆ, ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ ಮತ್ತು ಹಾಂಗ್ ಕಾಂಗ್‌ನಿಂದ ಆಗಮಿಸಿದ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಕಳೆದ 15 ದಿನಗಳಲ್ಲಿ (ನವೆಂಬರ್ 12 ರಿಂದ) ಬಂದಿರುವ ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ ಮತ್ತು ಹಾಂಗ್ ಕಾಂಗ್‌ನ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಬೇಕಿದ್ದು, ಮರಳಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ (ಆರೋಗ್ಯ ಮತ್ತು ಕುಟುಂಬ) ಟಿ.ಕೆ.ಅನಿಲ್ ಕುಮಾರ್ ಅವರು ಹೇಳಿದ್ದಾರೆ.

ಕರ್ನಾಟಕ ಆರೋಗ್ಯ ಇಲಾಖೆಯು ಅಂತರರಾಷ್ಟ್ರೀಯ ವಿಮಾನಗಳ ಮೂಲಕ ಆಗಮಿಸುವ ಪ್ರಯಾಣಿಕರಿಂದ ಟ್ರಾವೆಲ್ ಹಿಸ್ಟರಿ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದು, ಈ ವೇಳೆ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದ್ದೇ ಆದರೆ, ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸುತ್ತಿದೆ

ಈ ನಡುವೆ ಕೇಂದ್ರ ಆರೋಗ್ಯ ಸಚಿವಾಲಯವು ಜೀನೋಮ್ ಸೀಕ್ವೆನ್ಸಿಂಗ್ ಮತ್ತು ಹಾಟ್‌ಸ್ಪಾಟ್‌ಗಳ ನಿರಂತರ ಮೇಲ್ವಿಚಾರಣೆ ನಡೆಸಿ ಮಾಹಿತಿ ನೀಡುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ರೂಪಾಂತರಿ ವೈರಸ್ ಗಳನ್ನು ಪರಿಶೀಲನೆ ನಡೆಸಲು INSACOG ಜೀನೋಮಿಕ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳ ಸ್ಥಾಪಿಸಲಾಗಿದೆ. ರಾಜ್ಯಗಳು ಮಾದರಿಗಳನ್ನು ಈ ಪ್ರಯೋಗಾಲಯಗಳಿಗೆ ಕಳುಹಿಸುವ ಮೂಲಕ ಪರೀಕ್ಷೆಗಳನ್ನು ಹೆಚ್ಚಿಸಬೇಕೆಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com