ತುಮಕೂರು: ಎರಡು ನರ್ಸಿಂಗ್ ಕಾಲೇಜಿನ 15 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
Published: 30th November 2021 05:48 PM | Last Updated: 30th November 2021 05:49 PM | A+A A-

ಸಾಂದರ್ಭಿಕ ಚಿತ್ರ
ತುಮಕೂರು: ಒಮಿಕ್ರಾನ್ ರೂಪಾಂತರ ತಳಿ ಜಗತ್ತಲ್ಲಿ ತಲ್ಲಣ ಸೃಷ್ಟಿಸಿರುವಂತೆಯೇ ತುಮಕೂರಿನ ಎರಡು ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಷಪಟ್ಟಿರುವ ಸುದ್ದಿ ಹೊರ ಬಿದ್ದಿದೆ.
ಇದನ್ನೂ ಓದಿ: ಜಗತ್ತಿನಾದ್ಯಂತ ಒಮಿಕ್ರಾನ್ ಇದುವರೆಗೆ ಎಲ್ಲೆಲ್ಲಿ, ಎಷ್ಟು ಮಂದಿಯಲ್ಲಿ ಕಾಣಿಸಿಕೊಂಡಿದೆ?
ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿ: ದೇಶದಲ್ಲಿ ಇಲ್ಲಿಯವರೆಗೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ: ಡಾ. ಮನ್ಸೂಖ್ ಮಾಂಡವೀಯಾ
ನಗರದ ಸಿದ್ಧಗಂಗಾ ನರ್ಸಿಂಗ್ ಕಾಲೇಜಿನ 8 ಮಂದಿ ವಿದ್ಯಾರ್ಥಿಗಳು ಹಾಗೂ ವರದರಾಜ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದುವರೆಗೂ ಜಿಲ್ಲೆಯಾದ್ಯಂತ ಸರಾಸರಿ 7 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಸೋಮವಾರ ಏಕಾಏಕಿ 23 ಹೊಸ ಪ್ರಕರಣಗಳು ಪತ್ತೆಯಾಗಿತ್ತು.
ಇದನ್ನೂ ಓದಿ: ಬೂಸ್ಟರ್ ಡೋಸ್ ಲಸಿಕೆ ನೀಡಿಕೆ ಬಗ್ಗೆ ಕೇಂದ್ರದಿಂದಲೇ ಅಂತಿಮ ತೀರ್ಮಾನ: ಸಚಿವ ಡಾ. ಕೆ. ಸುಧಾಕರ್