ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಡಿಸೆಂಬರ್ 3ರ ವರೆಗೆ ಮಳೆಯ ಕಾಟ!

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಸಾಧ್ಯತೆ ಕಾರಣದಿಂದ ಡಿಸೆಂಬರ್ 3 ವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಸಾಧ್ಯತೆ ಕಾರಣದಿಂದ ಡಿಸೆಂಬರ್ 3 ವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ನ. 30ರಿಂದ ಡಿ. 3ರವರೆಗೆ ಮಳೆಯಾಗುವ ಸಂಭವವಿದೆ.

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com