ಕೋವಿಡ್ ಕ್ಲಸ್ಟರ್ ಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ನಿಗಾ: ಮುಖ್ಯಮಂತ್ರಿ ಬೊಮ್ಮಾಯಿ

ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ನಿಂದಾಗುವ ಪರಿಣಾಮದ ಬಗ್ಗೆ ರಾಜ್ಯ ಸರ್ಕಾರ ಗಮನಿಸುತ್ತಿದೆ. ಈಗಿರುವ ಡೆಲ್ಟಾ ರೂಪಂತರಿಯಿಂದಾಗಿ ಅಲ್ಲಲ್ಲಿ ಆಗಿರುವ ಕ್ಲಸ್ಟರ್ ಗಳನ್ನು ರಾಜ್ಯ ಸರ್ಕಾರ ನಿಭಾಯಿಸುತ್ತಿದೆ. ಎರಡು ಹಂತದ  ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಹೊಸ ರೂಪಾಂತರಿ ಬಗ್ಗೆ ಹೆಚ್ಚಿನ ತನಿಖೆಗಾಗಿ ಎನ್ ಸಿ ಬಿ ಎಸ್ ಗೂ ಕಳುಹಿಸಿದ್ದೇವೆ ಎಂದರು. 

ವಿದೇಶಿ ಪ್ರಯಾಣಿಕರ ಬಗ್ಗೆ ಹೆಚ್ಚಿನ ನಿಗಾವಹಿಸಿದ್ದೇವೆ. ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮಾಡುತ್ತಿದ್ದೇವೆ. ವಿದೇಶಿ ಪ್ರಯಾಣಿಕರ ಸಂಪರ್ಕಕ್ಕೆ ಬಂದವರಿಗೂ ಇದು ಅನ್ವಯವಾಗಲಿದೆ. ಕ್ಲಸ್ಟರ್ ಗಳ ಬಗ್ಗೆ ವಿಶೇಷ ಮಾರ್ಗಸೂಚಿ ನೀಡಲಾಗಿದ್ದು, ಭಾಗವಹಿಸಿದ ಎಲ್ಲರನ್ನು ಟೆಸ್ಟ್ ಮಾಡಬೇಕು. 7ನೇ ದಿನದೊಳಗಾಗಿ ಮತ್ತೊಮ್ಮೆ ಪರೀಕ್ಷೆ ಮಾಡಬೇಕೆಂದು ಸೂಚಿಸಿದೇವೆ ಎಂದು ತಿಳಿಸಿದರು.

ಈ ಮಧ್ಯೆ ಕೋವಿಡ್ ಹೊಸ ರೂಪಾಂತರಿ ಕುರಿತಂತೆ ಸಚಿವರು ಇವತ್ತು ಸಭೆ ಮಾಡಲಿದ್ದಾರೆ. ಕೂಲಂಕುಷ ಚರ್ಚೆಯ ಬಳಿಕ, ವರದಿ ಪಡೆದು ನಾನು ಸಹ ಚರ್ಚೆ ನಡೆಸುತ್ತೇನೆ. ಲಾಕ್ ಡೌನ್ ಜಾರಿ ಮಾಡುವುದು ಊಹಾಪೋಹ. ಈ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಜನಜೀವನ ಯಾವ ರೀತಿ ನಡೆಯುತ್ತಿದೆ ಅದೇ ರೀತಿ ನಡೆಯಬೇಕು. ಎಲ್ಲೆಲ್ಲಿ ಜನರು ಸೇರುತ್ತಾರೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಬೆಳಗಾವಿ ಅಧಿವೇಶನದಲ್ಲಿ ಕೋವಿಡ್ ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಸಂಘ ಸಂಸ್ಥೆಗಳು ಸಭೆ ನಡೆಸಿದರೂ ಅಗತ್ಯ ಕ್ರಮೈಕೊಗಳ್ಳಬೇಕು. ವಿದೇಶದಲ್ಲಿ ಹೊಸ ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಅತ್ಯಂತ ಕಟ್ಟೆಚ್ಚರ ವಹಿಸುತ್ತಿದೆ ಅಂತಾ ಸಿಎಂ ಬೊಮ್ಮಾಯಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com