ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನಲ್ಲಿ ಒತ್ತುವರಿ ತೆರುವು: 60 ಕೋಟಿ ರೂ. ಮೌಲ್ಯದ ಆಸ್ತಿ ಬಿಡಿಎ ವಶಕ್ಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಗುರುವಾರ ಎಚ್‌ಬಿಆರ್ ಲೇಔಟ್‌ನಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 60 ಕೋಟಿ ರೂಪಾಯಿ ಮೌಲ್ಯದ 1.23 ಎಕರೆ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಒತ್ತುವರಿ ತೆರವು ಮಾಡಿದ ಜಾಗ
ಒತ್ತುವರಿ ತೆರವು ಮಾಡಿದ ಜಾಗ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಗುರುವಾರ ಎಚ್‌ಬಿಆರ್ ಲೇಔಟ್‌ನಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 60 ಕೋಟಿ ರೂಪಾಯಿ ಮೌಲ್ಯದ 1.23 ಎಕರೆ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಳಗ್ಗೆ 7 ಗಂಟೆಗೆ ಆರಂಭವಾದ ಒತ್ತುವರಿ ತೆರವು ಕಾರ್ಯಾಚರಣೆ ಮಧ್ಯಾಹ್ನ 3 ಗಂಟೆಯವರೆಗೂ ಮುಂದುವರಿಯಿತು ಎಂದು ಬಿಡಿಎ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಒತ್ತುವರಿ ಮಾಡಿದ್ದ ಜಾಗದಲ್ಲಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರವು ಮಾಡಿ ಬಿಡಿಎ ಅಧಿಕಾರಿಗಳು ಕಾಂಪೌಂಡ್ ಹಾಕಿದ್ದಾರೆ.

ಎಚ್‌ಬಿಆರ್ ಲೇಔಟ್‌ನ ಕಾಚರಕನಹಳ್ಳಿಯಲ್ಲಿ ಎರಡು ಶೆಡ್‌ಗಳನ್ನು ತೆರವುಗೊಳಿಸಲಾಯಿತು. "ಅಲ್ಲಿ ಒಂದು ಸಣ್ಣ ಕಾರ್ಖಾನೆ ಕಾರ್ಯನಿರ್ವಹಿಸುತ್ತಿತ್ತು. ಇಂದು ಒತ್ತುವರಿ ತೆರವು ಕಾರ್ಯ ನಡೆಯಲಿದೆ ಎಂದು ನಾವು ಈಗಾಗಲೇ ಅತಿಕ್ರಮಣದಾರರಿಗೆ ನೋಟಿಸ್ ನೀಡಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1978 ರಲ್ಲಿ ಬಿಡಿಎ ವಸತಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. 1985 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ, ಭೂಮಾಲೀಕರು ಬಿಡಿಎ ವಿರುದ್ಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಬಿಡಿಎ ಪರ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಕೋರ್ಟಿನಲ್ಲಿ ದಾವೆ ಹೂಡಿದರಾದರೂ ಅರ್ಜಿಯನ್ನು ತಿರಸ್ಕರಿಸಿ ಸದರಿ ಜಮೀನನ್ನು ವಶಕ್ಕೆ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com