ಕಲಬುರಗಿಯಲ್ಲಿ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ

ಒಂದು ಎಕರೆಯಲ್ಲಿ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರು ಹಣ ಖರ್ಚು ಮಾಡಲಾಗಿತ್ತು. ಆದರೆ ಮಳೆಯ ಕಾರಣದಿಂದಾಗಿ ಎಲ್ಲಾ ಬೆಳೆಯೂ ನಷ್ಟವಾಗಿದೆ ಎಂದು ಕಲಬರುಗಿ ರೈತ ಬಾಬೂರಾವ್ ಎಂಬುವರು ಹೇಳಿದ್ದಾರೆ
ಮಳೆಯಿಂದಾಗಿ ಕೊಳೆತಿರುವ ಈರುಳ್ಳಿ
ಮಳೆಯಿಂದಾಗಿ ಕೊಳೆತಿರುವ ಈರುಳ್ಳಿ

ಕಲಬುರಗಿ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕಲಬುರಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ.

ಒಂದು ಎಕರೆಯಲ್ಲಿ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರು ಹಣ ಖರ್ಚು ಮಾಡಲಾಗಿತ್ತು. ಆದರೆ ಮಳೆಯ ಕಾರಣದಿಂದಾಗಿ ಎಲ್ಲಾ ಬೆಳೆಯೂ ನಷ್ಟವಾಗಿದೆ ಎಂದು ಕಲಬರುಗಿ ರೈತ ಬಾಬೂರಾವ್ ಎಂಬುವರು ಹೇಳಿದ್ದಾರೆ.

ಸರ್ಕಾರದಿಂದ ಇದುವರೆಗೂ ಯಾವುದೇ ನೆರವು ಸಿಕ್ಕಿಲ್ಲ, ಮಳೆಯಿಂದ ನಷ್ಟಕ್ಕೊಳಗಾದ ರೈತರ ಸಹಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಅನಿರ್ಧಿಷ್ಟ ಮಳೆಯಿಂದಾಗಿ ಬೆಳೆ ನಾಶವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ಅತಿ ಹೆಚ್ಚು ಮಳೆಯಾಗುತ್ತಿದ್ದು, ಕಲಬುರಗಿಯಲ್ಲಿ ಸುಮಾರು 980 ಮಿಮಿ ಮಳೆ ಸುರಿದಿದೆ, ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಕಾರಣ ಈರುಳ್ಳಿ ಕೊಳೆತು ಹೋಗಿದೆ ಎಂದು ಸಸ್ಯರೋಗ ಶಾಸ್ತ್ರ ವಿಭಾಗದ ವಿಜ್ಞಾನಿ ಜಹೀರ್ ಅಹ್ಮದ್ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com