ಮೈಸೂರು ದಸರಾ ವೆಬ್ ಸೈಟ್: ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ 2021ರ ದಸರಾ ವೆಬ್ ಸೈಟ್ ನ್ನು ಸಹಕಾರ ಅವರು ಅ.1ರ ಶುಕ್ರವಾರ ಮೈಸೂರು ಅರಮನೆ ಆಡಳಿತ ಮಂಡಳಿಯಲ್ಲಿ ಉದ್ಘಾಟಿಸಿದರು.ವೆಬ್ ಸೈಟ್ ವಿಳಾಸ: www.mysoredasara.gov.in 
ಮೈಸೂರು ದಸರಾ ವೆಬ್ ಸೈಟ್ ಉದ್ಘಾಟಿಸಿದ ಸಚಿವ ಎಸ್ ಟಿ ಸೋಮಶೇಖರ್
ಮೈಸೂರು ದಸರಾ ವೆಬ್ ಸೈಟ್ ಉದ್ಘಾಟಿಸಿದ ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2021ರ ದಸರಾ ವೆಬ್ ಸೈಟ್ ನ್ನು ಸಹಕಾರ ಅವರು ಅ.1ರ ಶುಕ್ರವಾರ ಮೈಸೂರು ಅರಮನೆ ಆಡಳಿತ ಮಂಡಳಿಯಲ್ಲಿ ಉದ್ಘಾಟಿಸಿದರು. ವೆಬ್ ಸೈಟ್ ವಿಳಾಸ: www.mysoredasara.gov.in 

ಈ ಬಾರಿಯೂ ಸರಳ ದಸರಾ: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ದಸರಾ ಕಾರ್ಯಕ್ರಮಗಳು ವರ್ಚುವಲ್ ಆಗಿ ಪ್ರಸಾರವಾಗಲಿದೆ. ವೆಬ್‌ ಸೈಟ್, ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಕಾರ್ಯಕ್ರಮಗಳು ನೇರಪ್ರಸಾರವಾಗಲಿದೆ ಎಂದು ಹೇಳಿದರು.

ಜಂಬೂ ಸವಾರಿ, ಮೆರವಣಿಗೆ, ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಮೈಸೂರು ಅರಮನೆ, ಮೃಗಾಲಯ ನಡೆದು ಬಂದ ಹಾದಿ ಸೇರಿದಂತೆ ಸಂಪೂರ್ಣ ವಿವರಗಳು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಲಭ್ಯವಾಗಲಿದೆ.

ದಸರಾ ಹಿನ್ನೆಲೆ, ಉದ್ಘಾಟಕರ ಪರಿಚಯ, ಉಪಸಮಿತಿಗಳ ವಿವರ, ಕಾರ್ಯಕ್ರಮಗಳ ಪಟ್ಟಿ, ಹಿಂದಿನ ದಸರಾ ಮಹೋತ್ಸವದ ಫೋಟೋ, ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರಲಿದೆ. ದೇಶಿ-ವಿದೇಶಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂಗ್ಲಿಷ್ ನಲ್ಲಿ ಕೂಡ ಮಾಹಿತಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ಹಾಗೂ ಮೈಸೂರು ಜನತೆಯ ಹಿತದೃಷ್ಟಿಯಿಂದ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಎಲ್ಲೂ ಕೂಡ ಕೋವಿಡ್ ನಿಯಮಗಳನ್ನು ಮೀರದಂತೆ ಸುರಕ್ಷಿತವಾಗಿ ದಸರಾ ಆಚರಣೆ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಡಿಸಿಪಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಕುಮಾರ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ವೆಬ್‌ಸೈಟ್ ನೊಡೆಲ್ ಅಧಿಕಾರಿ ಆರ್.ರಾಜು, ಜಿಲ್ಲಾ ಎನ್‌.ಐ.ಸಿ ಅಧಿಕಾರಿ ಸುದರ್ಶನ್, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com