ತುಮಕೂರು: ಲಾರಿ – ಬೈಕ್ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸಾವು
ಲಾರಿ – ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲ್ಲೂಕು ಪತ್ರೆಮತ್ತಿಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.
Published: 01st October 2021 02:48 PM | Last Updated: 01st October 2021 02:48 PM | A+A A-

ಸಾಂದರ್ಭಿಕ ಚಿತ್ರ
ತುಮಕೂರು: ಲಾರಿ – ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲ್ಲೂಕು ಪತ್ರೆಮತ್ತಿಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ತುಮಕೂರು ತಾಲ್ಲೂಕಿನ ಹೆಬ್ಬೂರು ಬಳಿಯ ರಾಮೇನಹಳ್ಳಿ ನಿವಾಸಿಗಳಾದ ಚಿಕ್ಕಸ್ವಾಮಿ(32) ಕೃಷ್ಣಮೂರ್ತಿ (30) ಎಂದು ಗುರುತಿಸಲಾಗಿದೆ.
ಇದನ್ನು ಓದಿ: ಆನೇಕಲ್: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ
ಘಟನೆಯಲ್ಲಿ ಪೂರ್ಣಿಮಾ(32) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಸದ್ಯ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂವರು ಮೂವರು ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.