ಸಂಗ್ರಹ ಚಿತ್ರ
ರಾಜ್ಯ
ಮಂಗಳೂರು: ಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಪ್ರಾಧ್ಯಾಪಕನ ಬಂಧನ
ಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಹೆಚ್ಡಿ ಮಾಡುತ್ತಿದ್ದರು. ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದರು.
ಆದರೆ, ವಿವಿಯ ಅನುಮತಿ ಕೇಳಿದಾಗ ಅವರಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಆದರೆ, ಆ ಬಳಿಕವೂ ಸುಧೀರ್ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ