ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 397 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,978,286ಕ್ಕೆ ಏರಿಕೆಯಾಗಿದೆ.
ಮಹಾಮಾರಿಗೆ ಇಂದು 13 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,832ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು 166 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,47,258ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 693 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,28,433ಕ್ಕೆ ಏರಿಕೆಯಾಗಿದೆ. ಇನ್ನು11,992 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 78,958 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 397 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.50ಕ್ಕೆ ಇಳಿದಿದೆ.
Advertisement