ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಹುದ್ದೆಗಳು ಖಾಲಿ: ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳ ಸಂಖ್ಯೆ: 1242 

ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು

ಕೆಲಸದ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಭಾರತೀಯ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಶೇ. 55ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಅಥವಾ ಮಾನ್ಯತೆ ಪಡೆದಿರುವ ವಿದೇಶಿ ವಿಶ್ವವಿದ್ಯಾಲಯದಿಂದ ಪಡೆದ ತತ್ಸಮಾನದ ಪದವಿ ಪಡೆದಿರಬೇಕು. ಮತ್ತು ಯುಜಿಸಿ ಅಥವಾ ಸಿ.ಎಸ್.ಐ.ಆರ್. ಮೂಲಕ ನಡೆಸಲಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಯಲ್ಲಿ ಅಥವಾ ಅಂಥ ಯುಜಿಸಿ “ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ” ಅಥವಾ “ಕೆಸೆಟ್” ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಿರಬೇಕು.

ವೇತನ: ರೂ. 57,700 ದಿಂದ ರೂ. 1,82,400  ವೇತನ

ವಯೋಮಾನ ಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 22 ವರ್ಷ ಪೂರೈಸಿರಬೇಕು. 
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಮಂಗಳೂರು ಸ್ಥಳಗಳಲ್ಲಿ ನಡೆಸಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ:
ಪ್ರವರ್ಗ 2ಎ, 2ಬಿ, 3ಎ,3ಬಿ, ಸಾಮಾನ್ಯ ಅಭ್ಯರ್ಥಿಗಳು ರೂ. 2000
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು ರೂ. 1000

ಶುಲ್ಕ ಪಾವತಿ ವಿಧಾನ: ಶುಲ್ಕವನ್ನು ಕಂಪ್ಯೂಟರೈಸಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು.

ಕೊನೆಯ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 06, 2021
ಇ-ಪೋಸ್ಟ್ ಆಫೀಸಿನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ನವೆಂಬರ್ 10, 2021

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://cetonline.karnataka.gov.in/kea/Assprof
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com