ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ಮನೋಜ್ ಕುಮಾರ್ ಮೀನಾ ನೇಮಕ

ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ 2003ರ ಬ್ಯಾಚಿನ ರಾಜ್ಯದ  ಐಐಎಸ್ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ನೇಮಕವಾಗಿದ್ದಾರೆ.
ಮನೋಜ್ ಕುಮಾರ್ ಮೀನಾ
ಮನೋಜ್ ಕುಮಾರ್ ಮೀನಾ

ಬೆಂಗಳೂರು: ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ 2003ರ ಬ್ಯಾಚಿನ ರಾಜ್ಯದ  ಐಐಎಸ್ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ನೇಮಕವಾಗಿದ್ದಾರೆ.

ಮುಖ್ಯ ಚುನಾವಣಾಧಿಕಾರಿಯಾಗಿದ್ದ ಸಂಜೀವ್ ಕುಮಾರ್ ಅವರ ಅಧಿಕಾರವಧಿ ಸೆಪ್ಟೆಂಬರ್ 30ಕ್ಕೆ ಅಂತ್ಯಗೊಂಡಿತ್ತು. ಅವರಿಂದ ತೆರವಾಗಿರುವ ಸ್ಥಾನಕ್ಕೆ   ಮನೋಜ್ ಕುಮಾರ್ ಮೀನಾ ಅವರನ್ನು ನೇಮಕ ಮಾಡಲಾಗಿದೆ. 

ಈ ಸಂಬಂಧ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದ್ದು, ರಾಜ್ಯ ವಸತಿ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ಮನೋಜ್ ಕುಮಾರ್ ಮೀನಾ ಅವರನ್ನು ಬಿಡುಗಡೆಗೊಳಿಸಿ, ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com