ಮೈಸೂರು: ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 7 ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ನಿಷೇಧ

ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7, ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 
ಚಾಮುಂಡಿ ಬೆಟ್ಟ
ಚಾಮುಂಡಿ ಬೆಟ್ಟ

ಮೈಸೂರು: ಮಹಾಲಯ ಅಮಾವಾಸ್ಯೆ ಮತ್ತು ದಸರಾ ಉದ್ಘಾಟನೆ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಅಂದರೆ ಅಕ್ಟೋಬರ್ 5ರ ಮುಂಜಾನೆಯಿಂದ ನಾಡಿದ್ದು 7ನೇ ತಾರೀಖು ಗುರುವಾರದ ಮಧ್ಯಾಹ್ನದವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. 

ಸಾರ್ವಜನಿಕರ ವಾಹನಗಳಿಗೂ ನಿಷೇಧ ಹೇರಲಾಗಿದ್ದು, ದಸರಾ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವವರಿಗೆ ಈ ನಿಷೇಧ ಅನ್ವಯವಾಗುವುದಿಲ್ಲ ಎಂದು ಮೈಸೂರು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಮೈಸೂರು ಅರಮನೆಯಲ್ಲಿ ಸರಳ ಆಚರಣೆ: ಕೋವಿಡ್-19 ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ಈ ಬಾರಿಯೂ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿಗಳನ್ನು ಕೇವಲ ಸಾಂಪ್ರದಾಯಿಕವಾಗಿ ನಡೆಸಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಚರಣೆಯಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮಗಳ ಭಾಗವಹಿಸುವಿಕೆ ಇರುವುದಿಲ್ಲ, ಕೋವಿಡ್ ಹರಡುವಿಕೆ ತಡೆ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com