ಆಸ್ತಿ ತೆರಿಗೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

 ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ರಾಜ್ಯದಲ್ಲಿ ಜನಸ್ನೇಹಿ ತೆರಿಗೆ ವ್ಯವಸ್ಥೆ ಜಾರಿ ಮಾಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಹೊಂಗಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ಪೀಠವು ವಿಚಾರಣೆ ನಡೆಸಿತು.

ತಿದ್ದುಪಡಿ ಮಾಡಲಾಗಿರುವ ಕರ್ನಾಟಕ ಪುರಸಭೆಗಳ ಕಾಯಿದೆಯ ಸೆಕ್ಷನ್‍ಗಳಾದ 101 ಮತ್ತು 102ಎ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯಿದೆ ಸೆಕ್ಷನ್ 108 ಹಾಗೂ ಫೆಬ್ರವರಿ 19ರಂದು ಹೊರಡಿಸಲಾಗಿರುವ ಸುತ್ತೋಲೆಯನ್ನು ರದ್ದುಪಡಿಸುವಂತೆ ಮನವಿಯಲ್ಲಿ ಕೋರಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com