ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿ ಆರಂಭಕ್ಕೆ ಒಂದು ತಿಂಗಳ ಗಡುವು, ಇಲ್ಲದಿದ್ದರೆ ಪ್ರತಿಭಟನೆ: ಕಾಂಗ್ರೆಸ್ ಎಚ್ಚರಿಕೆ

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಒಂದು ತಿಂಗಳ ಗಡುವು ನೀಡಿದೆ. ಸರ್ಕಾರ ಕಾಮಗಾರಿ ಆರಂಭಿಸಲು ವಿಫಲವಾದರೆ ಪ್ರತಿಭಟನೆ ಆರಂಭಿಸುವುದಾಗಿ ಹೇಳಿದೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಒಂದು ತಿಂಗಳ ಗಡುವು ನೀಡಿದೆ. ಸರ್ಕಾರ ಕಾಮಗಾರಿ ಆರಂಭಿಸಲು ವಿಫಲವಾದರೆ ಪ್ರತಿಭಟನೆ ಆರಂಭಿಸುವುದಾಗಿ ಹೇಳಿದೆ.

ಈ ಬಗ್ಗೆ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳನ್ನು ಕೈಗೆತ್ತಿಗೊಳ್ಳಲು ಕೇಂದ್ರ ಮತ್ತು ರಾಜ್ಯ ಎರಡೂ ಕಡೆಗಳಲ್ಲಿ ಬಿಜೆಪಿ ಸರ್ಕಾರವಿರುವಾಗ ಏಕೆ ವಿಳಂಬ ಮಾಡುತ್ತಿದೆ ಎಂದು ಕೇಳಿದ್ದಾರೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಿಂದೆ ಜಲ ಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿ ಅವರಿಗೆ ಯೋಜನೆ ಕೈಗೆತ್ತಿಕೊಳ್ಳಲು ಕಾನೂನು ಅಗತ್ಯಗಳ ಬಗ್ಗೆ ಅರಿವಿದೆ. ಮೇಕೆದಾಟು ಯೋಜನೆ ಆರಂಭಿಸುವುದಕ್ಕೆ ತಡೆಯೊಡ್ಡಲು ತಮಿಳು ನಾಡು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಹಾಗಿರುವಾಗ ಮುಖ್ಯಮಂತ್ರಿಗಳು ಮೇಕೆದಾಟು ಯೋಜನೆ ಆರಂಭಕ್ಕೆ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೃಷ್ಣ ಮತ್ತು ಮಹದಾಯಿ ಯೋಜನೆಗಳನ್ನು ಕೂಡ ಆರಂಭಿಸಿಲ್ಲವೇಕೆ ಎಂದು ಕನಕಪುರ ಕ್ಷೇತ್ರದ ಶಾಸಕರೂ ಆಗಿರುವ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಅನುಮತಿ, ಅನುಮೋದನೆಗಳನ್ನು ತೆಗೆದುಕೊಂಡು ಒಂದು ತಿಂಗಳೊಳಗೆ ಮೇಕೆದಾಟು ಕಾಮಗಾರಿಯನ್ನು ಆರಂಭಿಸಬೇಕು. ಸರ್ಕಾರ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಲ್ಲಿ ವಿಳಂಬ ಮಾಡಿದರೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಆರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com