ನಗರ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರಕ್ಕೆ 10 ಸಾವಿರ ಕೋಟಿ ರು. ಮನವಿ: ಭೈರತಿ ಬಸವರಾಜ್

ರಾಜ್ಯದ ಸಣ್ಣ ನಗರಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ ಮನವಿ ಸಲ್ಲಿಸಿರುವುದಾಗಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 
ಲಕ್ನೋದಲ್ಲಿ ನಡೆದ ಸಮಾವೇಶದಲ್ಲಿ ಭೈರತಿ ಬಸವರಾಜ್
ಲಕ್ನೋದಲ್ಲಿ ನಡೆದ ಸಮಾವೇಶದಲ್ಲಿ ಭೈರತಿ ಬಸವರಾಜ್

ಬೆಂಗಳೂರು: ರಾಜ್ಯದ ಸಣ್ಣ ನಗರಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ ಮನವಿ ಸಲ್ಲಿಸಿರುವುದಾಗಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋಗಿ ಅವರ ನೇತೃತ್ವದಲ್ಲಿ ಲಕ್ನೋದಲ್ಲಿ ನಡೆದ ಮೂರು ದಿನಗಳ ಸಮಾವೇಶದಲ್ಲಿ ಭೈರತಿ ಬಸವರಾಜ್ ಭಾಗವಹಿಸಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡ ಭಾಗವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದೆ, ಆದರೆ ಅವರ ಬಿಡುವಿಲ್ಲದ ವೇಳಾಪಟ್ಟಿಯ ಹಿನ್ನೆಲೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಭೈರತಿ ಬಸವರಾಜ್ ದಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ರಾಜ್ಯದ ಮನವಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ತಿಳಿಸಿದ್ದಾರೆ. ಹಾಗೂ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಯನ್ನು ಭೇಟಿ ಮಾಡಿ. ಕರ್ನಾಟಕದ 75 ಪಟ್ಟಣಗಳನ್ನು   ಒಳಚರಂಡಿ ಮತ್ತು 60 ಪಟ್ಟಣಗಳ ಕುಡಿಯುವ ನೀರಿನ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದೆ, ಕೇಂದ್ರ ಸಚಿವರು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ಪತ್ರದಲ್ಲಿ, ಸಚಿವ ಬಸವರಾಜ್ ಅವರು ಈ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡುವುದರಿಂದ ಸಣ್ಣ ಪಟ್ಟಣಗಳಿಂದ ಜನಸಂಖ್ಯೆಯು ಬೆಂಗಳೂರಿಗೆ ಹೋಗದಂತೆ ತಡೆಯಲು ಮಹತ್ವದ್ದಾಗಿದೆ. ಇದರಿಂದ ಬೆಂಗಳೂರು ನಗರವನ್ನು ಮತ್ತಷ್ಟು ದಟ್ಟಣೆ ಮಾಡುತ್ತದೆ ಎಂದು ಹೇಳಿದರು.

ಕುಡಿಯುವ ನೀರು ಯೋಜನೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ. 15 ನೇ ಹಣಕಾಸು ಆಯೋಗವು ಕುಡಿಯುವ ನೀರು ಮತ್ತು ನೈರ್ಮಲ್ಯವನ್ನು ರಾಷ್ಟ್ರೀಯ ಆದ್ಯತೆಯಾಗಿ ಗುರುತಿಸಿದೆ. ಕೊಳವೆಗಳು, ಪಂಪ್‌ಗಳು ಮತ್ತು ಶೇಖರಣಾ ಬಿಂದುಗಳ ಜಾಲವನ್ನು ಒದಗಿಸುವ ಕುಡಿಯುವ ನೀರಿನ ಯೋಜನೆಗೆ ಸುಮಾರು 4,000 ಕೋಟಿ ರೂಪಾಯಿಗಳು ಬೇಕಾಗುತ್ತವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com