ರಾಜ್ಯಕ್ಕೆ ರಾಷ್ಟ್ರಪತಿ ಕೋವಿಂದ್‌ ಆಗಮನ; ಸಿಎಂ ಬೊಮ್ಮಾಯಿ ಸ್ವಾಗತ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬುಧವಾರ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ರಾಷ್ಟ್ರಪತಿಗಳಿಗೆ ಸಿಎಂ ಬೊಮ್ಮಾಯಿ ಸನ್ಮಾನ
ರಾಷ್ಟ್ರಪತಿಗಳಿಗೆ ಸಿಎಂ ಬೊಮ್ಮಾಯಿ ಸನ್ಮಾನ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬುಧವಾರ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸರ್ಕಾರದ ಪರವಾಗಿ ಸನ್ಮಾನಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಹೈ ಟೀ ಕಾರ್ಯಕ್ರಮ ಏರ್ಲಿಪಡಿಸಲಾಗಿದ್ದು, ರಾಷ್ಟ್ರಪತಿಗಳು ರಾತ್ರಿ ರಾಜಭವನದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಆಕ್ಟೊಬರ್ 7 ರಂದು ರಾಷ್ಟ್ರಪತಿಗಳು ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನಾಥಸ್ವಾಮಿ ದೇಗುಲಕ್ಕೆ ಭೇಟಿ ನೀಡಲಿದ್ದು, ಜಿಲ್ಲೆಯಲ್ಲಿ 450 ಹಾಸಿಗೆ   ಸಾಮರ್ಥ್ಯದ ಆಸ್ಪತ್ರೆ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಹಾಗೂ ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಾಥ್ ಅವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮ ನಂತರ ಮೈಸೂರು, ಮಂಗಳೂರಿಗೆ ತೆರಳುವ ರಾಷ್ಟ್ರಪತಿಗಳು ಅಕ್ಟೊಬರ್ 8 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ಶ್ರೀಗಳಿಂದ ಆಶೀರ್ವಾದ ಪಡೆಯಲಿದ್ದಾರೆ. ಅಂದೇ ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಮರಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com