ಬೆಳಗಾವಿ ಮನೆ ಕುಸಿತ ಪ್ರಕರಣ: ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ; 5 ಲಕ್ಷ ರೂ. ಚೆಕ್ ವಿತರಿಸಿದ ಕಾರಜೋಳ

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗುರುವಾರ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 
ಸಚಿವ ಗೋವಿಂದ್ ಕಾರಜೋಳ ಪರಿಹಾರದ ಚೆಕ್ ವಿತರಿಸಿದರು
ಸಚಿವ ಗೋವಿಂದ್ ಕಾರಜೋಳ ಪರಿಹಾರದ ಚೆಕ್ ವಿತರಿಸಿದರು

ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಚೇರಿ, ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ನೋವು ತಂದಿದೆ. ಈ ದುಃಖದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಮೃತರ ಕುಟುಂಬಗಳಿಗೆ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳು ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರವನ್ನು ನೀಡಲಾಗುತ್ತದೆ ಎಂದು ಹೇಳಿದೆ.

ಏತನ್ಮಧ್ಯೆ, ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು, ರಾಜ್ಯ ಸರ್ಕಾರದಿಂದ ಪರಿಹಾರವಾಗಿ ಮನೆ ಕುಸಿತದಲ್ಲಿ ಮೃತಪಟ್ಟ ಎಲ್ಲಾ ಏಳು ಮಂದಿಯ ಸಂಬಂಧಿಕರಿಗೆ ತಲಾ 5 ಲಕ್ಷ ರೂ. ಗಳ ಚೆಕ್ ವಿತರಿಸಿದರು. ಸಚಿವರು ಗುರುವಾರ ಬೆಳಿಗ್ಗೆ ಬದಲಂಕಲಗಿಯಲ್ಲಿರುವ ದುಃಖಿತ ಕುಟುಂಬಗಳಿಗೆ ಭೇಟಿ ನೀಡಿ ಚೆಕ್‌ಗಳನ್ನು ನೀಡಿದರು.

ಘಟನೆಯಲ್ಲಿ ಸಾವನ್ನಪ್ಪಿದ ಮೂವರು ಮಕ್ಕಳ ಕುಟುಂಬಕ್ಕೆ ಇನ್ನೂ 1 ಲಕ್ಷ ರೂಪಾಯಿ ಪರಿಹಾರವನ್ನು ಮಕ್ಕಳ ಕಲ್ಯಾಣ ನಿಧಿಯಿಂದ ನೀಡಲಾಗುವುದು ಎಂದು ಕಾರಜೋಳ ಹೇಳಿದರು.

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಕಳೆದ ರಾತ್ರಿ ಮನೆ ಕುಸಿದುಬಿದ್ದು ಇಬ್ಬರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದರು. ಘಟನೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೃತರ ಕುಟುಂಬಗಳಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com