ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 140 ಸೇರಿ 397 ಪ್ರಕರಣ ಪತ್ತೆ; 5 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 397 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ.
Published: 08th October 2021 05:40 PM | Last Updated: 08th October 2021 06:42 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 397 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ.
ಮಹಾಮಾರಿಗೆ ಇಂದು 5 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,866ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಈ ದಿನದ ಪ್ರಮುಖ ಸುದ್ದಿಗಳ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಇಂದು 140 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,47,970ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 603 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,30,867ಕ್ಕೆ ಏರಿಕೆಯಾಗಿದೆ. ಇನ್ನು11,408 ಸಕ್ರೀಯ ಪ್ರಕರಣಗಳಿವೆ.
Today's Media Bulletin 08/10/2021
— K'taka Health Dept (@DHFWKA) October 8, 2021
Please click on the link below to view bulletin.https://t.co/Keed9yY9NP @PMOIndia @MoHFW_INDIA @CMofKarnataka @BSBommai @mla_sudhakar @BBMPCOMM @mysurucitycorp @mangalurucorp @DDChandanaNews @AIRBENGALURU1 @KarnatakaVarthe @PIBBengaluru pic.twitter.com/0SfWJNhKrw
ರಾಜ್ಯಾದ್ಯಂತ ಇಂದು 91,772 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 397 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.43ಕ್ಕೆ ಇಳಿದಿದೆ.