ದುರಸ್ತಿ ಕಾರ್ಯ: ಎಂ.ಜಿ.ರಸ್ತೆ- ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದವರೆಗೆ ನಾಳೆ ಅಪರಾಹ್ನದಿಂದ ಅ.10 ಬೆಳಗ್ಗೆ 6 ರವರೆಗೆ ಸಂಚಾರ ಸ್ಥಗಿತ

ಮೆಟ್ರೊ ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಕಾಮಗಾರಿ ನಿರ್ವಹಿಸಲು ಮೆಟ್ರೊ ಸೇವೆಯನ್ನು ನಾಳೆ ಅಪರಾಹ್ನ 4 ಗಂಟೆಯಿಂದ ಅ.10 ಬೆಳಗ್ಗೆ 6 ಗಂಟೆಯವರೆಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮೆಟ್ರೊ ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಕಾಮಗಾರಿ ನಿರ್ವಹಿಸಲು ಮೆಟ್ರೊ ಸೇವೆಯನ್ನು ನಾಳೆ ಅಪರಾಹ್ನ 4 ಗಂಟೆಯಿಂದ ಅ.10 ಬೆಳಗ್ಗೆ 6 ಗಂಟೆಯವರೆಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. 

ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದವರೆಗೆ ವಾಣಿಜ್ಯ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿ ಮೆಟ್ರೊ ರೈಲು ಸೇವೆಯು ಪ್ರಯಾಣಿಕರಿಗೆ ಎಂ ಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೊ ನಿಲ್ದಾಣಗಳ ಮಧ್ಯೆ ಮಾತ್ರ ಲಭ್ಯವಿರುತ್ತದೆ. ದುರಸ್ತಿ ಕಾರ್ಯ ಮುಗಿದ ನಂತರ ಭಾನುವಾರ ಎಂದಿನಂತೆ ನೇರಳೆ ಮಾರ್ಗದಲ್ಲಿ ಪ್ರಯಾಣಿಕರಿಗೆ ಪುನರಾರಂಭವಾಗುತ್ತಿದ್ದು, ನಾಳೆ ಹಸಿರು ಮಾರ್ಗದಲ್ಲಿ ಎಂದಿನಂತೆ ಮೆಟ್ರೊ ರೈಲು ಸೇವೆ ಲಭ್ಯವಿರುತ್ತದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com