ಚಿಂಚೋಳಿಯಲ್ಲಿ ಲಘು ಭೂಕಂಪದ ಅನುಭವ: ಮನೆಯಿಂದ ಹೊರ ಓಡಿ ಬಂದ ಜನ
ಜಿಲ್ಲೆಯ ಚಿಂಚೋಳಿ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.
Published: 08th October 2021 02:06 PM | Last Updated: 08th October 2021 02:06 PM | A+A A-

ಸಾಂದರ್ಭಿಕ ಚಿತ್ರ
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.
ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ್ದು, ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಹಲವರು ಮನೆಯ ಹೊರಗಡೆ ರಾತ್ರಿ ಮಲಗಿಕೊಂಡಿದ್ದಾರೆ.
ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು
ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ಭಾರೀ ಸದ್ದು ಬರುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಲಘು ಭೂಕಂಪನವಾಗಿದ್ದು, ಜನ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.