ಪದವಿ ಕೋರ್ಸ್‌ ನಲ್ಲಿ ಕನ್ನಡ ಕಡ್ಡಾಯ ಆದೇಶ: ಸರ್ಕಾರ ವಿರುದ್ಧ ಹೈಕೋರ್ಟ್ ನಲ್ಲಿ ಅರ್ಜಿ

ಪದವಿ ಕೋರ್ಸ್‌ಗೆ ದಾಖಲಾಗುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕನ್ನಡ ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಅಧ್ಯಯನ ಮಾಡಬೇಕು ಎಂಬ ಸರ್ಕಾರದ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿದ್ದು, ಕೋರ್ಟ್ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದೆ ಎನ್ನಲಾಗಿದೆ. 
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪದವಿ ಕೋರ್ಸ್‌ಗೆ ದಾಖಲಾಗುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕನ್ನಡ ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಅಧ್ಯಯನ ಮಾಡಬೇಕು ಎಂಬ ಸರ್ಕಾರದ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿದ್ದು, ಕೋರ್ಟ್ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದೆ ಎನ್ನಲಾಗಿದೆ. 

ರಾಜ್ಯ ಸರ್ಕಾರ ಹೊರಡಿಸಿದ ಎರಡು ಆದೇಶಗಳ ವಿರುದ್ಧ ನಗರ ಮೂಲದ ನಾಲ್ಕು ಸಂಸ್ಥೆಗಳು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪದವಿ ಹಂತದಲ್ಲಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿದೆ. ಕನ್ನಡದ ಜ್ಞಾನವಿಲ್ಲದ ಇತರ ರಾಜ್ಯಗಳ ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಭಾಷೆಯನ್ನು ಕಲಿಯಲು ಸಾಧ್ಯವಿಲ್ಲದ ಕಾರಣ ವಿಫಲರಾಗುತ್ತಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ. ಅಂತೆಯೇ ಅರ್ಜಿದಾರರು ಸರ್ಕಾರದ ಆದೇಶಗಳು ರಾಜ್ಯದ 1.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 4,000 ಭಾಷಾ ಶಿಕ್ಷಕರ ಮೇಲೆ ಪರಿಣಾಮ ಬೀರುತ್ತವೆ ಎಂದು ಪ್ರತಿಪಾದಿಸಿದ್ದಾರೆ.

ಅರ್ಜಿದಾರರು - ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಹಯಗ್ರೀವ ಟ್ರಸ್ಟ್ ಮತ್ತು ವ್ಯೋಮಾ ಭಾಷಾ ಪ್ರಯೋಗಾಲಯಗಳ ಪ್ರತಿಷ್ಠಾನ - ಉನ್ನತ ಶಿಕ್ಷಣ ಇಲಾಖೆಯಿಂದ ಹೊರಡಿಸಲಾದ ಆಗಸ್ಟ್ 7 ಮತ್ತು ಸೆಪ್ಟೆಂಬರ್ 15, 2021 ರ ಸರ್ಕಾರಿ ಆದೇಶಗಳನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿವೆ. 

ಆಗಸ್ಟ್ 7 ರ ಆದೇಶವು ಪದವಿ ಕೋರ್ಸ್‌ಗಳಿಗೆ NEPಯ ಅನುಷ್ಠಾನಕ್ಕೆ ಮಾರ್ಗಸೂಚಿಗಳನ್ನು ನೀಡುತ್ತದೆ. ಆದರೆ ಎರಡು ಭಾಷೆಗಳನ್ನು ಇತರ ವಿಷಯಗಳೊಂದಿಗೆ ಆರಿಸಬೇಕಾಗುತ್ತದೆ. ಅವುಗಳಲ್ಲಿ ಒಂದು ಕಡ್ಡಾಯ ಕನ್ನಡವಾಗಿದೆ. ಬಳಿಕ, ಸೆಪ್ಟೆಂಬರ್ 15, 2021 ರಂದು ಹೊರಡಿಸಲಾದ ಇನ್ನೊಂದು ಆದೇಶವು ಹಿಂದಿನ ಆದೇಶವನ್ನು ಹೇಗೆ ಕಾರ್ಯಗತಗೊಳಿಸಲಾಗುವುದು ಎಂಬುದನ್ನು ಸ್ಪಷ್ಟಪಡಿಸುವುದು.

ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಪ್ರತಿಯೊಬ್ಬರೂ ಈ ಹಿಂದೆ ಶಾಲೆಯಲ್ಲಿ ಅಥವಾ ಪೂರ್ವ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ಅದನ್ನು ಆರಿಸಿಕೊಳ್ಳಬೇಕು. ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲರ ವಾದಗಳನ್ನು ಆಲಿಸಿದ ನಂತರ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ನ್ಯಾಯಪೀಠವು ಸರ್ಕಾರಿ ವಕೀಲರು ಸಮಯ ಕೇಳಿದ ಹಿನ್ನಲೆಯಲ್ಲಿ ಪ್ರಕರಣವನ್ನು ಶುಕ್ರವಾರಕ್ಕೆ ಮುಂದೂಡಿತು.

"ಇದು ಸೂಕ್ಷ್ಮ ವಿಚಾರ" ಎಂದು ಅಭಿಪ್ರಾಯಪಟ್ಟ ಕರ್ನಾಟಕ ಉಚ್ಚ ನ್ಯಾಯಾಲಯವು ಇಂದು ಎರಡು ಸರ್ಕಾರಿ ಆದೇಶಗಳ ಕಾರ್ಯಾಚರಣೆಯನ್ನು ತಡೆಹಿಡಿಯಲು ಕೋರಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಮಧ್ಯಂತರ ಪರಿಹಾರಕ್ಕಾಗಿ ಮನವಿಯನ್ನು ಪರಿಗಣಿಸುವುದಾಗಿ ಹೇಳಿದೆ. ಅಲ್ಲದೆ  "ರಾಜ್ಯ ಸರ್ಕಾರದ ಪರವಾಗಿ ಹಾಜರಾದ ವಕೀಲ ಶ್ರೀನಿಧಿ ಅವರಿಗೆ ನಾಳೆ ಈ ವಿಷಯವನ್ನು ಪಟ್ಟಿ ಮಾಡಲು ಆದೇಶಿಸಿಸಿದೆ. ಈ ಆದೇಶದ ಮೂಲಕ ಅನುಮತಿಸಲಾಗಿದೆ. ಮಧ್ಯಂತರ ಪರಿಹಾರವನ್ನು ಪರಿಗಣಿಸಲು ನಾಳೆ ವಿಷಯವನ್ನು ಪಟ್ಟಿ ಮಾಡಿ" ಎಂದು ಹೇಳಿದೆ.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಎಸ್.ಎಸ್ ನಾಗಾನಂದ್ ತಮ್ಮ ವಾದ ಮಂಡಿಸಿ 'ಇದು ಸುಮಾರು 1,32,000 ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಅವರು "ವಿದ್ಯಾರ್ಥಿ ದೆಹಲಿಯಿಂದ ಬಂದರೆ, ಅವನು ಕನ್ನಡವನ್ನು ಅಧ್ಯಯನ ಮಾಡಿಲ್ಲ, ಬಿಎ ಕೋರ್ಸ್ ಅಧ್ಯಯನ ಮಾಡಲು ಇಲ್ಲಿಗೆ ಬಂದರೆ, ಅವನು ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು ಎನ್ನುತ್ತಿದ್ದಾರೆ. ಆದರೆ ಅದನ್ನು ಕಾರ್ಯಗತಗೊಳಿಸುವುದು ಕಷ್ಟ ಎಂದು ವಾದಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com