ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವ ಕುರಿತು  ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ಸುಧಾಕರ್, ಸಿಎಂ ಬೊಮ್ಮಾಯಿ
ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ಸುಧಾಕರ್, ಸಿಎಂ ಬೊಮ್ಮಾಯಿ

ನವದೆಹಲಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವ ಕುರಿತು  ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಎನ್‍ಎಚ್‍ಎಂ ಅಡಿ ಅನುದಾನ ನೀಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. 

ಸಚಿವ ಡಾ.ಕೆ.ಸುಧಾಕರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ ಹಲವು ವಿಚಾರಗಳ ಕುರಿತು ಉಭಯ ನಾಯಕರು ಚರ್ಚಿಸಿದರು ಎನ್ನಲಾಗಿದೆ. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಕೇಂದ್ರ ಆರೋಗ್ಯ ಸಚಿವರು, ರಾಜ್ಯ ಕೋವಿಡ್ ನಿರ್ವಹಣೆಯಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ ಸಂಗ್ರಹವಿದೆ. ಮೊದಲ ಡೋಸ್ ನಲ್ಲಿ ಶೇ.82 ಹಾಗೂ ಎರಡೂ ಡೋಸ್ ನಲ್ಲಿ ಒಟ್ಟು ಶೇ.37 ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ ಎನ್‍ಎಚ್‍ಎಂ ಅಡಿಯಲ್ಲಿ ಹೆಚ್ಚು ಅನುದಾನ ಬೇಕಿದೆ ಎಂದು ಕೋರಲಾಗಿದೆ. ಇದಕ್ಕೆ ಸಕಾರಾತ್ಮಕವಾದ ಸ್ಪಂದನೆ ಸಿಕ್ಕಿದೆ. ಜಿಲ್ಲೆಗಳಲ್ಲಿ ತುರ್ತು ಘಟಕ, ದ್ವಿತೀಯ, ತೃತೀಯ ಹಂತದ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಬಗ್ಗೆಯೂ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ವೈದ್ಯರು ಮತ್ತು ಶುಶ್ರೂಷಕರ ಸೇರ್ಪಡೆ ಮತ್ತು ಉತ್ತಮ ಮೂಲಸೌಕರ್ಯಗಳೊಂದಿಗೆ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಿಕೊಳ್ಳಲು ಎನ್‌ಎಚ್‌ಎಂ ಅಡಿಯಲ್ಲಿ ವರ್ಷಕ್ಕೆ 250 ಪಿಎಚ್‌ಸಿಗಳನ್ನು ಮೇಲ್ದರ್ಜೆಗೇರಿಸುವ ಗುರಿ ಹೊಂದಿದ್ದೇವೆ. ಮಕ್ಕಳಿಗೆ ಲಸಿಕೆ ಹಾಕುವ ಕುರಿತು ಕೇಂದ್ರದ ಮಾರ್ಗಸೂಚಿಗಳಿಗಾಗಿ ರಾಜ್ಯ ಸರ್ಕಾರ ಕಾಯುತ್ತಿದೆ ಎಂದೂ ಅವರು ತಿಳಿಸಿದರು. 

ಅಂತೆಯೇ ಮಕ್ಕಳ ಲಸಿಕೆ ಕುರಿತು ಮಾತನಾಡಿದ ಅವರು, 'ಮಕ್ಕಳಿಗೆ ನೀಡಲಾಗುವ ಲಸಿಕೆಗೆ ನಾವೂ ಕಾಯುತ್ತಿದ್ದೇವೆ. ಇದು ಇನ್ನೂ ಪ್ರಯೋಗದ ಹಂತದಲ್ಲಿದೆ ಎಂದು ತಿಳಿದುಬಂದಿದೆ. ಲಸಿಕೆ ತಯಾರಿಕಾ ಕಂಪನಿಗಳೊಂದಿಗೆ ಚರ್ಚಿಸಿದ ಬಳಿಕ ಕೇಂದ್ರ ಸರ್ಕಾರ ಈ ಬಗ್ಗೆ ಪ್ರಕಟಿಸಲಿದೆ. ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆಗೆ ಮಾರ್ಗಸೂಚಿ ನೀಡಲಾಗಿದೆ. ಕೊರೊನಾ ಪರೀಕ್ಷೆಯನ್ನು ನಿರಂತರವಾಗಿ ಮಾಡುತ್ತಿದ್ದು, ನಿತ್ಯ ಒಂದೂವರೆ ಲಕ್ಷ ಪರೀಕ್ಷೆ ನಡೆಯುತ್ತಿದೆ. ಪಾಸಿಟಿವಿಟಿ ದರ ಶೇ.0.4 ಗಿಂತಲೂ ಕಡಿಮೆ ಇದೆ. ಆದ್ದರಿಂದ ಹೆಚ್ಚು ಆತಂಕವಿಲ್ಲ ಎಂದರು.

ಇದೇ ವೇಳೆ ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಶೇ.90ರಷ್ಟು ಫಲಾನುಭವಿಗಳಿಗೆ ಕನಿಷ್ಠ 1 ಡೋಸ್ ಮತ್ತು ಕನಿಷ್ಠ ಶೇ. 70ರಷ್ಟು ಫಲಾನುಭವಿಗಳಿಗೆ ಎರಡು ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. 

ಕೋವಿಡ್ ನಿರ್ವಹಣೆ: ಕರ್ನಾಟಕಕ್ಕೆ ಕೇಂದ್ರ ಸಚಿವರಿಂದ ಶ್ಲಾಘನೆ
ಕೇಂದ್ರ ಆರೋಗ್ಯ ಸಚಿವರು, ರಾಜ್ಯ ಕೋವಿಡ್ (Covid) ನಿರ್ವಹಣೆಯಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸುಧಾಕರ್ ಹೇಳಿದ್ದು, 'ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ ಸಂಗ್ರಹವಿದೆ. ಮೊದಲ ಡೋಸ್ ನಲ್ಲಿ ಶೇ.82 ಹಾಗೂ ಎರಡೂ ಡೋಸ್ ನಲ್ಲಿ ಒಟ್ಟು ಶೇ.37 ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ ಎನ್‍ಎಚ್‍ಎಂ ಅಡಿಯಲ್ಲಿ ಹೆಚ್ಚು ಅನುದಾನ ಬೇಕಿದೆ ಎಂದು ಕೋರಲಾಗಿದೆ. ಇದಕ್ಕೆ ಸಕಾರಾತ್ಮಕವಾದ ಸ್ಪಂದನೆ ಸಿಕ್ಕಿದೆ. ಜಿಲ್ಲೆಗಳಲ್ಲಿ ತುರ್ತು ಘಟಕ, ದ್ವಿತೀಯ, ತೃತೀಯ ಹಂತದ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಬಗ್ಗೆಯೂ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com