ಕಲಬುರಗಿಯಲ್ಲಿ ಮತ್ತೆ ಎರಡು ಬಾರಿ ಲಘು ಭೂಕಂಪನ; 24 ಗಂಟೆಗಳಲ್ಲಿ ಇದು ಮೂರನೇಯದು

ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಮತ್ತೆ ಲಘು ಭೂಕಂಪದ ಅನುಭವವಾಗಿದೆ. ಶನಿವಾರ ತಾಲ್ಲೂಕಿನ ಹಲಚೇರಾ ಹಾಗೂ ಗಡಿಕೇಶ್ವರ ಗ್ರಾಮದಲ್ಲಿ ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಮತ್ತೆ ಲಘು ಭೂಕಂಪದ ಅನುಭವವಾಗಿದೆ. ಶನಿವಾರ ತಾಲ್ಲೂಕಿನ ಹಲಚೇರಾ ಹಾಗೂ ಗಡಿಕೇಶ್ವರ ಗ್ರಾಮದಲ್ಲಿ ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿದೆ.

ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದವು. ಇದರಿಂದ ಎಚ್ಚರಗೊಂಡ ಜನ ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದರು ಮತ್ತು ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದಾರೆ.

ಶುಕ್ರವಾರವು ಜಿಲ್ಲೆಯಲ್ಲಿ 2.6 ತೀವ್ರತೆ ಕಂಪನವಾಗಿದ್ದು, ಕಾಳಗಿ‌ ತಾಲೂಕಿನ ಹಲಚೇರಾ ಗ್ರಾಮ ಕಂಪನದ ಕೇಂದ್ರ ಬಿಂದುವಾಗಿತ್ತು. ಇಂದು ಕೂಡಾ ಲಘು ಭೂ ಕಂಪನವಾಗಿದೆ. ಕೆಲವೇ ಹೊತ್ತಲ್ಲಿ ಭೂಕಂಪನದ ತೀವ್ರತೆ ಬಗ್ಗೆ ಮಾಹಿತಿ ದೊರಕಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಆಗಾಗ ಲಘು ಭೂಕಂಪನ ಸಂಭವಿಸುತ್ತಿದೆ. ಕಾಳಗಿ ತಾಲೂಕಿನ ಹ‌ಲಚೇರಾ, ತೇಗಲತಿಪ್ಪಿ, ಹೊಸಳ್ಳಿ ಗ್ರಾಮದಲ್ಲಿ ಕೂಡಾ ಲಘು ಭೂಕಂಪನ ಅನುಭವವಾಗಿದೆ ಎಂದರು.

ಕಳೆದ 24 ಗಂಟೆಗಳಲ್ಲಿ ಭೂಮಿ ಮೂರು ಬಾರಿ ಕಂಪಿಸಿದ್ದು, ಜನ ಭಯಭೀತರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com