ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಸೆರೆ ಹಿಡಿದ ಆಟೋ ಚಾಲಕ
ದಾರಿಹೋಕ ಮಹಿಳೆಯ ಚಿನ್ನದ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಕಳ್ಳನೋರ್ವನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೋರ್ವ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Published: 10th October 2021 03:10 PM | Last Updated: 10th October 2021 03:10 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ದಾರಿಹೋಕ ಮಹಿಳೆಯ ಚಿನ್ನದ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಕಳ್ಳನೋರ್ವನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೋರ್ವ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಾಬಸಪೇಟೆ ನಿವಾಸಿ ಕೇಶವಮೂರ್ತಿ (31) ಬಂಧಿತ ಆರೋಪಿ. ಬಂಧಿತನಿಂದ 40 ಸಾವಿರ ರೂ. ಮೌಲ್ಯದ 9.5 ಗ್ರಾಂ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆಟೋ ಚಾಲಕ ರುದ್ರೇಶ್ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.