ರಾಜ್ಯದಾದ್ಯಂತ ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ನಿನ್ನೆ ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಸರಾಸರಿ 14.2 ಮಿ.ಮೀ ಮಳೆಯಾಗಿದ್ದು, ಇದೇ ಅವಧಿಯಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣದ ಸುತ್ತಮುತ್ತ13.6 ಎಂಎಂ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15 ಎಂಎಂ ಮಳೆಯಾಗಿದೆ. 

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 6 ರವರೆಗೆ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದ್ದು (ಶೇ.20 ಹೆಚ್ಚು). ಕರಾವಳಿ ಭಾಗದಲ್ಲಿ ಸಾಮಾನ್ಯ ಮಳೆ (ಶೇ.6 ಹೆಚ್ಚು), ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ (ಶೇ.-25) ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿದೆ (ಶೇ.62)ಯಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com