ಬೆಂಗಳೂರು: ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆ

ಪತ್ರ ಬರೆದಿಟ್ಟು ಭಾನುವಾರ ನಾಪತ್ತೆಯಾಗಿದ್ದ‌ ಮಕ್ಕಳು ನಗರದ ಆನಂದರಾವ್‌ ವೃತ್ತದಲ್ಲಿ ಸೋಮವಾರ ಬೆಳಗಿನ ಜಾವ ಪತ್ತೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪತ್ರ ಬರೆದಿಟ್ಟು ಭಾನುವಾರ ನಾಪತ್ತೆಯಾಗಿದ್ದ‌ ಮಕ್ಕಳು ನಗರದ ಆನಂದರಾವ್‌ ವೃತ್ತದಲ್ಲಿ ಸೋಮವಾರ ಬೆಳಗಿನ ಜಾವ ಪತ್ತೆಯಾಗಿದ್ದಾರೆ.

‘ಬರೀ ಓದು ಎನ್ನುತ್ತೀರಾ, ಆದರೆ, ನಾವು ಕ್ರೀಡೆಯಲ್ಲಿ ಸಾಧನೆ ಮಾಡಿ, ಹೆಸರು ಹಾಗೂ‌ ಹಣ ಸಂಪಾದನೆ‌ ಮಾಡುತ್ತೇವೆ' ಎಂದು ಮಕ್ಕಳು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದರು.

ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ‌ವಾಸವಿದ್ದ ಪರೀಕ್ಷಿತ್, ನಂದನ್ ಹಾಗೂ ಕಿರಣ್, ವಾಯುವಿಹಾರಕ್ಕೆ‌ ಹೋಗಿ ಬರುವುದಾಗಿ‌‌ ಹೇಳಿ ಹೋದವರು ಮನೆಗೆ ವಾಪಸ್ಸಾಗಿರಲಿಲ್ಲ. ಹೀಗಾಗಿ ಗಾಬರಿಗೊಂಡಿದ್ದ ಅವರ ಪೋಷಕರು ಬಾಗಲಗುಂಟೆ ಠಾಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೀಗ ಚಿಂದಿ ಆಯುವ ವ್ಯಕ್ತಿಯೊಬ್ಬರು ನೀಡಿದ ಮಾಹಿತಿ ಆಧರಿಸಿ ಸಿಸಿಟಿವಿ ದೃಶ್ಯ ಪರಿಶೀಲಿಸಿದ ಪೊಲೀಸರು ಮಕ್ಕಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಮಕ್ಕಳು ಉಪ್ಪಾರಪೇಟೆ ಪೊಲೀಸರ ರಕ್ಷಣೆಯಲ್ಲಿದ್ದು, ಬಾಗಲಗುಂಟೆ ಪೊಲೀಸರು ಬಂದ ತಕ್ಷಣ ಮಕ್ಕಳನ್ನ ಒಪ್ಪಿಸಲಿದ್ದಾರೆ.

ಮಕ್ಕಳು ಮನೆ ಬಿಟ್ಟ ನಂತರ ಕೆಂಗೇರಿಗೆ ಬಂದಿದ್ದಾರೆ. ಕೆಂಗೇರಿಯಿಂದ ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿ ಒಂದು ದಿನ ಕಳೆದಿರುವ ಮಕ್ಕಳು, ಮೈಸೂರು ದಸರಾದಲ್ಲಿ ನಡೆಯುತ್ತಿದ್ದ ದೇಶೀಯ ಕ್ರೀಡೆಗಳನ್ನು ನೋಡಿದ್ದಾರೆ. ನಿನ್ನೆ ರಾತ್ರಿ ಮೈಸೂರಿಂದ ಮಕ್ಕಳು ಬೆಂಗಳೂರಿಗೆ ಬಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com