ಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು

ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.
ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.

ಸೈಟ್ ಕೊಡಿಸುವುದಾಗಿ ಹಣ ಪಡೆದು, ವಂಚಿಸಿದ್ದಾರೆಂದು ಕಟ್ಟಾ ವಿರುದ್ಧ ಆರೋಪಿಸಲಾಗಿದ್ದು, 2004ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ವಂಚಿಸಿರುವ ಆರೋಪವಿದಾಗಿದೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಇಂಡ್ ಸಿಂಡ್ ಎಂಬ ಕಂಪನಿಯಿಂದ ಸೈಟ್ ಕೊಡಿಸುವುದಾಗಿ 2.85 ಕೋಟಿ ಹಣ ಪಡೆದಿದ್ದರು. ನಗದು ಹಾಗೂ ಚೆಕ್ ಮೂಲಕ 2.85 ಕೋಟಿ ಹಣ ಪಡೆದಿದ್ದರು. ಈ ಬಗ್ಗೆ ಹಲವು ಬಾರಿ ವಿಚಾರಿಸಿದ್ದರು. ಆದರೆ ಅವರು ಸರಿಯಾಗಿ ಪ್ರತಿಕ್ರಿಯಿಸಿರಲಿಲ್ಲ ಎಂದು ದೂರಲಾಗಿದೆ.

ಈ ಹಿನ್ನಲೆಯಲ್ಲಿ ಇಂಡ್ ಸಿಂಡ್ ಡೆಲವಪರ್ಸ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಕೋರ್ಟ್ ಮೊರೆ ಹೋಗಿದ್ದು, ಸೈಟ್ ಮತ್ತು ಫ್ಲಾಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ಕೋರ್ಟ್ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಎಫ್ಐಆರ್ ದಾಖಲಾಗಿದೆ. ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com