ತುರ್ತಾಗಿ ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಕಾರ್ಯ ಮುಗಿಸಿ: ಅಧಿಕಾರಿಗಳಿಗೆ ಸಚಿವ ಸಿಸಿ ಪಾಟೀಲ್ ಸೂಚನೆ

ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. 
ಸಿಸಿ ಪಾಟೀಲ್
ಸಿಸಿ ಪಾಟೀಲ್

ಬೆಂಗಳೂರು: ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಭಾರಿ ಮಳೆಯಿಂದಾಗಿ ಪುಣೆ– ಬೆಂಗಳೂರು ರಾಷ್ಟ್ರೀಯ  ಹೆದ್ದಾರಿಯೂ ಸೇರಿ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಹೆದ್ದಾರಿ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು.

ಹೆದ್ದಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಇದಕ್ಕೆ ಅಗತ್ಯ ಸಹಕಾರ ನೀಡಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಗುತ್ತಿಗೆದಾರರಿಂದ ತಡವಾದರೆ ಅವರಿಗೆ ನೋಟೀಸ್‌ ನೀಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದರು.  ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಕಡೆಗಳಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಿಸಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ. ಇದರಿಂದ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳಿಂದ ವ್ಯಾಪಕ ದೂರುಗಳು ಬಂದಿವೆ. ಇವುಗಳನ್ನು ಪರಿಶೀಲಿಸಿ ಮತ್ತು ಸ್ಥಳೀಯರ ಮನವೊಲಿಸಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆಗೆದು ಹಾಕಬೇಕು ಎಂದು ಪಾಟೀಲ್ ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com