ನೇಮಕಾತಿ 2021: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು.
ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು ಮಹಾನಗರ ಪಾಲಿಕೆ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 190
ಹುದ್ದೆ ಹೆಸರು: ಪೌರಕಾರ್ಮಿಕರು (ಗ್ರೂಪ್ ಡಿ)
ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಅರ್ಹತೆ:
ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ಕನ್ನಡ ಮಾತನಾಡಲು ಗೊತ್ತಿರಬೇಕು.
ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ 45 ವರ್ಷ ಮೀರಿರಬಾರದು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000-ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ: ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.  ಅಭ್ಯರ್ಥಿಗಳು ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್‌ಸೈಟ್ http://dakshinakannadadudc.mrc.gov.in/kn/recuritment  ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.

ಅರ್ಜಿ ಶುಲ್ಕ
ಪರಿಶಿಷ್ಠ ಜಾತಿ/ಪರಿಶಿಷ್ಠ .ಪಂಗಡ./ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳು ರೂ. 100, ಉಳಿದ ಅಭ್ಯರ್ಥಿಗಳು ರೂ. 200 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ: 
ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್ ನಲ್ಲಿ ಲಭ್ಯವಿರುವ PDF ಚಲನ್ ಅನ್ನು ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕ ಪಾವತಿ ಮಾಡತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 23, 2021

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
http://dakshinakannadadudc.mrc.gov.in/kn/recuritment
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com