ಕೋವಿಡ್-19: ರಾಜ್ಯದಲ್ಲಿ ಇಂದು 357 ಹೊಸ ಪ್ರಕರಣ ಪತ್ತೆ, 10 ಸಾವು

ಕರ್ನಾಟಕ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಕಡಿಮೆಯಾಗುತ್ತಿದ್ದು, ಇಂದು ರಾಜ್ಯದಲ್ಲಿ 357 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಕಡಿಮೆಯಾಗುತ್ತಿದ್ದು, ಇಂದು ರಾಜ್ಯದಲ್ಲಿ 357 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಇಂದು 357 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿನ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 29, 82, 089ಕ್ಕೆ ಏರಿಕೆಯಾಗಿದೆ.

ಅಂತೆಯೇ ಇಂದು 438 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 29, 34, 523ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 10ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 37, 916ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ರಾಜ್ಯದಲ್ಲಿ 9,621 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com