ಮಳೆ ಹಾನಿಗೆ ಎನ್​ಡಿಆರ್​ಎಫ್​ ನಿಯಮಾವಳಿಯಂತೆ ಪರಿಹಾರ; ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಿಎಂ ಬೊಮ್ಮಾಯಿ

ಕಳೆದ ವರ್ಷದಂತೆ ಎನ್.ಡಿ.ಆರ್.ಎಫ್ ನಿಯಮಾವಳಿಗಳಂತೆ ಪರಿಹಾರ ನೀಡಲು ಸೂಚಿಸಲಾಗಿದೆ. ಇನ್ನು ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಳೆದ ವರ್ಷದಂತೆ ಎನ್.ಡಿ.ಆರ್.ಎಫ್ ನಿಯಮಾವಳಿಗಳಂತೆ ಪರಿಹಾರ ನೀಡಲು ಸೂಚಿಸಲಾಗಿದೆ. ಇನ್ನು ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಮಳೆಹಾನಿ ನಷ್ಟ ಕುರಿತಂತೆ ಸಂಬಂಧಪಟ್ಟ ಸಚಿವರು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದರು. ಅಕ್ಟೊಬರ್ ನಲ್ಲಿ ನಿರಂತರವಾಗಿ ಮಳೆಯಾಗಿದ್ದು, 2-3 ಜಿಲ್ಲೆಗಳನ್ನು ಬಿಟ್ಟರೆ  ಶೇ. 30ರಿಂದ 50 ರಷ್ಟು ಹೆಚ್ಚುವರಿ ಮಳೆಯಾಗಿದೆ. ಇದುವರೆಗೂ 21 ಜನ ಸಾವನ್ನಪ್ಪಿದ್ದಾರೆ. ಜೂನ್ ನಿಂದ ಇಲ್ಲಿಯವರೆಗೂ 4, 71,000 ಹೆಕ್ಟೇರ್ ಬೆಲೆ ಹಾನಿಯಾಗಿದೆ. 105 ಕೋಟಿ ರೂ.ಗಳ ಪರಿಹಾರವನ್ನು 1.17 ಲಕ್ಷ  ರೈತರಿಗೆ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ 738 ಕೋಟಿ ರೂ.ಗಳು ಲಭ್ಯವಿದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಬೇಡಿಕೆ ಮತ್ತು ಕಲ್ಲಿದ್ದಲು ಪರಿಸ್ಥಿತಿ  ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ತಿಳಿಸಿದರು. 

ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರನ್ನು ದೆಹಲಿಯಲ್ಲಿ ಭೇಟಿಯಾದ ನಂತರ 2 ರೇಕುಗಳು ಹೆಚ್ಚುವರಿಯಾಗಿ ಬರುತ್ತಿವೆ. 10 ರೇಕುಗಳು ಪ್ರತಿನಿತ್ಯ ಪೂರೈಕೆಯಾಗುತ್ತಿದ್ದು, 98,863 ಮೆಟ್ರಿಕ್ ಟನ್ ದಾಸ್ತಾನು ಇದೆ. ಸಿಂಗರೇಣಿ ಗಣಿಗಳಿಂದ ನಮಗೆ ಎರಡು ರೇಕುಗಳು ದೊರಕಲಿದ್ದು, ತೆಲಂಗಾಣ ಮುಖ್ಯಮಂತ್ರಿಗಳೊಡನೆ ಹಾಗೂ ಕೇಂದ್ರದ ಕಲ್ಲಿದ್ದಲು ಸಚಿವರೊಂದಿಗೆ ಸಹ  ಮಾತನಾಡಿ ಒಟ್ಟು 12 ರೇಕುಗಳ ಪೂರೈಕೆಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ ಎಂದರು.

ಭೂಕಂಪ ಪ್ರಕರಣ ವರದಿ ನೀಡಲು ಸಿಎಂ ಆದೇಶ
ಬೆಂಗಳೂರು ಕಲಬುರ್ಗಿ ಜಿಲ್ಲೆಯಲ್ಲಿ ಲಘು ಭೂಕಂಪ ಪ್ರಕರಣ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಸರ್ಕಾರ ತುರ್ತಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದು,ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ   ತುರ್ತಾಗಿ ಪ್ರಕೃತಿ ವಿಕೋಪ ನಿರ್ವಹಣೆ ಕೋಶದ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಚಿಂಚೋಳಿ ಸೇಡಂನಲ್ಲಿ ತುರ್ತಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com