ಪರಸ್ಪರರ ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ-ಪ್ರತಿಕ್ರಿಯೆಗಳು ಸಹಜ: ನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬೊಮ್ಮಾಯಿ ಹೇಳಿಕೆ
ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.
Published: 14th October 2021 08:26 AM | Last Updated: 15th October 2021 02:02 PM | A+A A-

ಸಿಎಂ ಬೊಮ್ಮಾಯಿ
ಮಂಗಳೂರು: ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.
ಅನೈತಿಕ ಪೊಲೀಸ್ ಗಿರಿ ಆರೋಪಿಗಳ ಪರ ನಿಂತ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ವಿಚಾರ ಕುರಿತು ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿಯವರು, ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.
ನೈತಿಕ ಪೊಲೀಸ್ ಗುರಿ ಎಂಬುದು ಸೂಕ್ಷ್ಮ ವಿಚಾರ. ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ. ನೈತಿಕತೆ ಇಲ್ಲದೆ ಬದುಕೋಕೆ ಆಗುತ್ತಾ...ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ಇರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಅಗುತ್ತೆ ಎಂದು ತಿಳಿಸಿದ್ದಾರೆ.