ರಾಜ್ಯದಲ್ಲಿ ಇನ್ನೂ 3 ದಿನ ಮಳೆಯ ಅಬ್ಬರ; ಜೋಪಾನ...

ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮೂರು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮೂರು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಇದೇ 17 ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದರ ಜೊತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ವರದಿ ಹೇಳಿದೆ.

ಭಾರಿಮಳೆ: ಮನೆಗಳಿಗೆ ನುಗ್ಗಿದ ನೀರು
ಮಹಾನಗರದಲ್ಲಿ ತಡರಾತ್ರಿ ಭಾರಿ ಮಳೆಯಾಗಿದೆ. ಇದರಿಂದ ಕೆಲವಾರು ಪ್ರದೇಶಗಳಲ್ಲಿ ಮನೆಗಳಿಗೆ ಭಾರಿ ಪ್ರಮಾಣದ ನೀರುನುಗ್ಗಿ ನಿವಾಸಿಗಳು ಆತಂಕದಿಂದಿದ್ದಾರೆ.

ನಿನ್ನೆ ರಾತ್ರಿ ಸಾಧಾರಣ ಮಳೆ ಆರಂಭವಾಗಿದೆ. ರಾತ್ರಿ ಒಂದು ಗಂಟೆ ನಂತರ ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಮುಂಜಾನೆ 3 ರಿಂದ ಭಾರಿ ಮಳೆ ದಾಖಲಾಗಿದೆ. ನಗರದ ಪಶ್ಚಿಮ ಭಾಗದ ಲಕ್ಷ್ಮೀನಾರಾಯಣ ಪುರ. ಬಸವೇಶ್ವರನಗರ. ಗಾಯತ್ರಿ ನಗರಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಹಲವು ಮನೆಗಳ ನಿವಾಸಿಗಳು ತೀವ್ರ ಆತಂಕಿತರಾಗಿದ್ದಾರೆ. ಮಳೆನೀರನ್ನು ಹೊರ ಹಾಕುವುದರಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಜರಾಜೇಶ್ವರಿ ನಗರ ವಲಯದಲ್ಲಿ ರಾಜರಾಜೇಶ್ವರಿ ನಗರ, ಆದರ್ಶ ಮನೆಗಳು, ಅಕ್ಕಮಹಾದೇವಿ ಚೌಲ್ಟ್ರಿ ಬಳಿ, ವಾರ್ಡ್ ಸಂಖ್ಯೆ 38, ಪೀಣ್ಯ 4 ನೇ ಬಿ.ಎಲ್.ಕೆ. ಪ್ರದೇಶಗಳ ಹಲವು ಮನೆಗಳಿಗೆ ನೀರು ನುಗ್ಗಿದೆ. ದಾಸರಹಳ್ಳಿ ಭಾಗದಲ್ಲಿ ಭಾರಿ ಮಳೆ ದಾಖಲಾಗಿದೆ. ಮನೆಗಳೀಗೆ ನೀರು ಪ್ರವೇಶಿಸಿದೆ., ಚಕ್ಸಂದ್ರ ಸರೋವರ ಪ್ರದೇಶ, ಗುಂಡಪ್ಪ ಲೇಔಟ್ . ರಾಯಲ್ ಎನ್ ಕ್ಲೇವ್ ಬಿಟಿಎಸ್ ಲೇಔಟ್ ಇಲ್ಲಿನ ಹಲವು ಮನೆಗಳಿಗೆ ನೀರು ನುಗ್ಗಿದೆ. ಚರಂಡಿಗಳಲ್ಲಿ ನೀರಿನ ಹರಿವು ಹೆಚ್ಚಾಗಿ ಮನೆಗಳ ಒಳಗೂ ಪ್ರವೇಶಿಸಿದೆ.

ನಗರದ ಪೂರ್ವಭಾಗ, ದಕ್ಷಿಣ ಭಾಗಗಳಲ್ಲಿ ಮಹದೇವಪುರದಲ್ಲಿ, ಯಲಹಂಕದಲ್ಲಿ, ಬೊಮ್ಮನಹಳ್ಳಿ ಭಾಗದಲ್ಲಿ ಮಧ್ಯರಾತ್ರಿ ದಾಟಿದ ಲಘು ಮಳೆ ದಾಖಲಾಗಿದೆ. ಮಳೆ ಸಂಬಂಧಿತ ಯಾವುದೇ ಕುಂದುಕೊರತೆಗಳು ವರದಿಯಾಗಿಲ್ಲ ನಿವಾಸಿಗಳು ದೂರು ನೀಡಿದ ನಂತರ ಆಯಾ ವಲಯದ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದಾರೆ.

ಬಸ್ ಮೇಲೆ ಬಿದ್ದ ಮರ: ನಿನ್ನೆ ರಾತ್ರಿ ನಗರದ ಚಿಕ್ಕಪೇಟೆ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಮೇಲೆ ಭಾರಿ ಗಾತ್ರದ ಮರ ಬಿದ್ದಿದೆ.ಬಸ್ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡರು.

ಮರ ಬಿದ್ದ ಕಾರಣ ಆ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಶೀಘ್ರ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com