ದಸರಾ ಹಬ್ಬದಂದೇ ಭೀಕರ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಇಬ್ಬರ ದುರ್ಮರಣ

ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ರಾಯಚೂರು: ದಸರಾ ಹಬ್ಬದಂದೇ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರೂ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ.

ಮೃತರನ್ನು ದೀಪಕ್ (22), ಹುಸೇನ್ (23) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ನಗರದ ತಿಮ್ಮಾಪೂರ ಪೇಟೆ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ತಮ್ಮ ಸಹೋದರನನ್ನು ಬೈಕ್‌ನಲ್ಲಿ ಕರೆದುಕೊಂಡು ಬರಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಯರಗೇರಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ‌ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com