ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮ: ಕ್ರೈಸ್ತ ಮಿಷನರಿಗಳ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ

ಬಲವಂತದ ಮತಾಂತರದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲಿನ ಅಧಿಕೃತ ಮತ್ತು ಅನಧಿಕೃತ ಕ್ರಿಶ್ಚಿಯನ್‌ ಮಿಷನರಿಗಳು ಎಷ್ಟಿವೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಸೂಚನೆ ನೀಡಿದೆ ತಿಳಿದುಬಂದಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಬಲವಂತದ ಮತಾಂತರದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ನಡುವಲ್ಲೇ ರಾಜ್ಯದಲ್ಲಿನ ಅಧಿಕೃತ ಮತ್ತು ಅನಧಿಕೃತ ಕ್ರಿಶ್ಚಿಯನ್‌ ಮಿಷನರಿಗಳು ಎಷ್ಟಿವೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಸೂಚನೆ ನೀಡಿದೆ ತಿಳಿದುಬಂದಿದೆ. 

ವಿಕಾಸಸೌಧದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಸಭೆ ನಡೆಸಿದ್ದು, ಈ ಸಭೆಯಲ್ಲಿ ಶಾಸಕರಾದ ಗೂಳಿಹಟ್ಟಿಶೇಖರ್‌, ಪುಟ್ಟರಂಗ ಶೆಟ್ಟಿ, ಬಿ.ಎಂ.ಫಾರೂಕ್‌, ವಿರೂಪಾಕ್ಷಪ್ಪ ಬಳ್ಳಾರಿ, ಅಶೋಕ್‌ ನಾಯ್ಕ್‌ ಸೇರಿದಂತೆ ಇತರರು ಭಾಗವಹಿಸಿದ್ದರು. 

ಮಿಷನರಿಗಳು ಸರ್ಕಾರದಿಂದ ಪಡೆಯುತ್ತಿರುವ ಸೌಲಭ್ಯಗಳು ಮತ್ತು ಕ್ರಿಶ್ಚಿಯನ್‌ ಮಿಷನರಿಗಳ ನೋಂದಣಿಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲಾಯಿತು. ಮತಾಂತರಗೊಳ್ಳುವ ಸಮುದಾಯದವರಿಗೆ ಕಲ್ಪಿಸಲಾಗುತ್ತಿರುವ ಸರ್ಕಾರಿ ಸೌಲಭ್ಯಗಳನ್ನು ಹಿಂಪಡೆದುಕೊಳ್ಳಬೇಕು ಎಂಬ ಶಿಫಾರಸನ್ನು ಸಮಿತಿ ಸದಸ್ಯರು ಮಾಡಿದ್ದಾರೆ.

ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್ ಎಂಎಲ್'ಸಿ ಪಿಆರ್.ರಮೇಶ್ ಅವರು ಮಾತನಾಡಿ, ಮಿಷನರಿಗಳು ಮತಾಂತರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇದರಿಂದ ರಾಜಕೀಯ ಶಕ್ತಿ ಪಡೆದುಕೊಳ್ಳಲು ಬಯಸಿದ್ದಾರೆ. ಜನರ ಹಾದಿ ತಪ್ಪಿಸದಂತೆ ಈಗಾಗಲೇ ತಿಳಿಸಿದ್ದಾನೆ. ಅವರು ಮಾನವೀಯತೆ ಹೊಂದಿರಬೇಕು ಮತ್ತು ಸಂವಿಧಾನ ಮತ್ತು ಶಾಸಕಾಂಗವನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ. 

ಸಮಿತಿಯ ಸದಸ್ಯರಾಗಿರುವ ಜೆಡಿಎಸ್ ಎಂಎಲ್'ಸಿ ಬಿಎಂ ಫಾರೂಖ್ ಅವರು ಮಾತನಾಡಿ, ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಈ ಕುರಿತು ಚರ್ಚೆಗಳು ನಡೆಯಬೇಕಿದೆ. ಸಮಿತಿಯಾಗಿ ನಮಗೆ ಅಷ್ಟೊಂದು ಬಲವಿಲ್ಲ. ಸಮಿತಿಯ ಸದಸ್ಯರು ಭಾನುವಾರ ಚರ್ಚ್'ಗಳಿಗೆ ಭೇಟಿ ನೀಡಬೇಕೆಂದು ಸಲಹೆ ನೀಡಿದ್ದರು. ಇದು ನನಗೆ ಇಷ್ಟವಾಗಲಿಲ್ಲ ಹೀಗಾಗಿ ನಾನು ಸಭೆಯಿಂದ ಹೊರ ನಡೆದಿದೆ ಎಂದು ಹೇಳಿದ್ದಾರೆ. 

ಗೂಳಿಹಟ್ಟಿ ಶೇಖರ್ ಅವರು ಚಳಿಗಾಲ ಅಧಿವೇಶನದಲ್ಲಿ ಧಾರ್ಮಿಕ ಮತಾಂತರದ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದರು. ತಮ್ಮ ತಾಯಿ ಮತಾಂತರಗೊಂಡಿರುವ ಬಗ್ಗೆ ಸದನದಲ್ಲಿ ಮಾತನಾಡಿದ್ದರು. 
 
ತಮ್ಮ ತಾಯಿ ಅರಿವಿಲ್ಲದೆ ಮತಾಂತರಗೊಂಡರು ಮತ್ತು ಕ್ರಿಶ್ಚಿಯನ್ ಮಿಷನರಿಗಳು ತಮ್ಮ ಮತಾಂತರ ಚಟುವಟಿಕೆಗಳನ್ನು ಪ್ರಶ್ನಿಸಿದವರ ಮೇಲೆ ಸುಳ್ಳು ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಗಳನ್ನು ಹೊರಿಸಿದರು.  

ಹೊಸದುರ್ಗ ಬಿಜೆಪಿ ಶಾಸಕರು ತಮ್ಮ ತಾಯಿ ತನ್ನ ಮನೆಯಲ್ಲಿ ಹಿಂದೂ ದೇವರನ್ನು ಪೂಜಿಸಲು ಯಾರಿಗೂ ಬಿಡುವುದಿಲ್ಲ ಎಂದು ಹೇಳಿದ್ದರು. ಅವರ ಸೆಲ್ ಫೋನಿನ ರಿಂಗ್‌ಟೋನ್ ಅನ್ನು ಕ್ರಿಶ್ಚಿಯನ್ ಪ್ರಾರ್ಥನೆಗಳಿಗೆ ಬದಲಾಯಿಸಿದ್ದಾರೆ ಎಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com