ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಟಾಟಾ ಏಸ್ ಡಿಕ್ಕಿ, ನಾಲ್ವರ ದುರ್ಮರಣ
ತುಮಕೂರಿನ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
Published: 17th October 2021 11:17 AM | Last Updated: 17th October 2021 11:17 AM | A+A A-

ಅಪಘಾತಕ್ಕೀಡಾಗಿರುವ ಬಸ್ ಹಾಗೂ ಟಾಟಾ ಏಸ್ ವಾಹನಗಳು
ತುಮಕೂರು: ತುಮಕೂರಿನ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಹಾಸನದಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ತುಮಕೂರಿನಿಂದ ಹೂ ಕೊಂಡೊಯ್ಯುತ್ತಿದ್ದ ರೈತರಿದ್ದ ಗೂಡ್ಸ್ ವಾಹನದ ನಡುವೆ ಇಂದು ಮುಂಜಾನೆ 5.30ರ ವೇಳೆಗೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಜನರು ನೆರವಿಗೆ ಧಾವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಳಿಸಿದ್ದಾರೆ. ಬಳಿಕ ಬಸ್‌ನಲ್ಲಿ ಇದ್ದ ಪ್ರಯಾಣಿಕರು ತುಮಕೂರು ಬಸ್ ನಿಲ್ದಾಣಕ್ಕೆ ತೆರಳಲು ನೆರವಾಗಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.